ಮಂಜುನಾಥ್ ಶೆಟ್ಟಿ…

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಮಠಕ್ಕೆ ಇಂದು ಭೇಟಿ ನೀಡಿ ಶ್ರೀ ಗುರು ಭೈರವೈಕ್ಯ ಮಂದಿರವನ್ನು ಲೋಕಾರ್ಪಣೆಗೊಳಿಸಿದ್ದಾರೆ. ಬಾಲಗಂಗಾಧರನಾಥ ಸ್ವಾಮಿಗಳ ಗದ್ದುಗೆಯ ಸ್ಥಳದಲ್ಲಿ ನಿರ್ಮಿಸಲಾಗಿರುವ ಈ ಭವ್ಯ ದೇಗುಲವನ್ನು ಪ್ರಧಾನಿಗಳು ಉದ್ಘಾಟಿಸಿ, ಸ್ವಾಮಿಗಳ ಮೂರ್ತಿಗೆ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಅವರು ಮಾತನಾಡಿ, ಒಂಭತ್ತು ಸಂಕಲ್ಪಗಳ ಮೇಲೆ ನಾವು ಪ್ರಾಮಾಣಿಕತೆ ಮತ್ತು ದೃಢನಿಶ್ಚಯದೊಂದಿಗೆ ಮುಂದೆ ಸಾಗಿದರೆ, ವಿಕಸಿತ ಕರ್ನಾಟಕ ಮತ್ತು ವಿಕಸಿತ ಭಾರತದತ್ತ ವೇಗವಾಗಿ ಸಾಗಬಹುದು. ಈ ಮಂದಿರವು ಮಠದ 71ನೇ ಪೀಠಾಧಿಪತಿ ಹಾಗೂ ವೋಕಳಿಗ ಸಮುದಾಯದಲ್ಲಿ ಅತ್ಯಂತ ಗೌರವ ಹೊಂದಿದ್ದ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮಿಗಳಿಗೆ ಸಮರ್ಪಿತ ಸ್ಮಾರಕವಾಗಿದೆ ಎಂದರು.

ಉದ್ಘಾಟನೆ ವೇಳೆ ಪ್ರಧಾನಿ ಮೋದಿ ಅವರ ಜೊತೆಗೆ ಆದಿಚುಂಚನಗಿರಿ ಮಠದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಕೇಂದ್ರ ಸಚಿವರಾದ ಕುಮಾರಸ್ವಾಮಿ ಮತ್ತು ಶೋಭಾ ಕರಂದ್ಲಾಜೆ ಅವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *