ಮಂಜುನಾಥ್ ಶೆಟ್ಟಿ…

ಶಿವಮೊಗ್ಗ ಜಿಲ್ಲೆಯ ವಿವಿಧ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಗೃಹ ಸದಸ್ಯರನ್ನಾಗಿ ನೋಂದಾಯಿಸುವ ಸಂಬಂಧ ಏ. 27 ರಂದು ಬೆಳಗ್ಗೆ 9.00 ರಿಂದ ಶಿವಮೊಗ್ಗ ನಗರದ ಸಾಗರ ರಸ್ತೆಯಲ್ಲಿರುವ ಡಿ.ಎ.ಆರ್. ಮೈದಾನದಲ್ಲಿ ಜಿಲ್ಲಾ ರಕ್ಷಣಾಧಿಕಾರಿಗಳು, ಅಪರ ಜಿಲ್ಲಾಧಿಕಾರಿಗಳು ಹಾಗೂ ಡಿ.ಡಿ.ಪಿ.ಐ. ಮತ್ತು ಸಮಾದೇಷ್ಟರ ಸಮ್ಮುಖದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಅರ್ಜಿ ಸಲ್ಲಿಸಿರುವ ಎಲ್ಲಾ ಅಭ್ಯರ್ಥಿಗಳು ತಮ್ಮ ಮೂಲ ದಾಖಲೆಗಳೊಂದಿಗೆ ಸಮಯಕ್ಕೆ ಸರಿಯಾಗಿ ಹಾಜರಾಗುವಂತೆ ಶಿವಮೊಗ್ಗ ಜಿಲ್ಲಾ ಗೌರವ ಸಮಾದೇಷ್ಟರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಗೃಹರಕ್ಷಕ ದಳ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ. : 08182-255630/ 295630ಗಳನ್ನು ಸಂಪರ್ಕಿಸುವುದು.
