ಅಂತರಾಷ್ಟಿಯ ಮಟ್ಟದಲ್ಲಿ ಸೇವಾ ಕ್ಷೇತ್ರದಲ್ಲಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಸಂಸ್ಥೆಗಳಲ್ಲಿ ರೋಟರಿ ಸಂಸ್ಥೆಯು ಮುಂಚೂಣಿಯಲ್ಲಿದೆ ಎಂದು ರೋಟರಿ ಜಿಲ್ಲೆ ಮಾಜಿ ಜಿಲ್ಲಾ ಗವರ್ನರ್ ಡಾ. ಪಿ.ನಾರಾಯಣ್ ಅಭಿಪ್ರಾಯಪಟ್ಟರು. ನಗರದ ರೋಟರಿ ಮಿಡ್‌ಟೌನ್‌ನಲ್ಲಿ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ವತಿಯಿಂದ ನೂತನ ಸದಸ್ಯರಿಗೆ ಆಯೋಜಿಸಿದ್ದ ಮಾಹಿತಿ ಕಾರ್ಯಾಗಾರ ಹಾಗೂ ರೋಟರಿಯ ಸಮಗ್ರ ಮಾಹಿತಿ ಕಾರ್ಯಾಗಾರದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸ್ನೇಹ, ಪ್ರೀತಿ ಹಾಗೂ ಸೇವೆಯ ಇನ್ನೊಂದು ಮುಖವೇ ರೋಟರಿ ಸಂಸ್ಥೆಯಾಗಿದೆ. ವಿಶ್ವದ ಎಲ್ಲ ರಾಷ್ಟçಗಳಲ್ಲಿಯೂ ರೋಟರಿ ಸಂಸ್ಥೆ ಮುಖಾಂತರ ಸಾವಿರಾರು ಕೋಟಿ ರೂ.ಗಳನ್ನು ಸಮಾಜಮುಖಿ ಕೆಲಸಗಳಲ್ಲಿ ವಿನಿಯೋಗಿಸಲಾಗುತ್ತದೆ. ರೋಟರಿ ಸಂಸ್ಥೆ ಮೂಲಕ ಇಂದಿಗೂ ಲಕ್ಷಾಂತರ ಜನರು ಸೇವಾ ಕಾರ್ಯಗಳಲ್ಲಿ ಕೈಜೋಡಿಸುತ್ತಿದ್ದಾರೆ ಎಂದು ತಿಳಿಸಿದರು. ಪಲ್ಸ್ ಪೊಲಿಯೋ ಕಾರ್ಯಕ್ರಮದ ನಂತರ ರೋಟರಿ ಸಂಸ್ಥೆಯು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದತ್ತ ಗಮನ ಹರಿಸುತ್ತಿದ್ದು, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ತರುವಲ್ಲಿ ಹೆಚ್ಚಿನ ಕೊಡುಗೆ ನೀಡುತ್ತಿದೆ. ಎಲ್ಲ ಸೇವಾ ಕಾರ್ಯಗಳು ನಿರಂತರವಾಗಿ ನಡೆಯಬೇಕು ಎಂದರು. ರೋಟರಿ ಸಂಸ್ಥೆಯಲ್ಲಿ ಹೆಚ್ಚು ಹೆಚ್ಚು ಹೊಸ ಸದಸ್ಯರನ್ನು ಸೇರ್ಪಡೆಗೊಳಿಸಬೇಕು. ಇದರಿಮದ ಸೇವಾ ಕಾರ್ಯಗಳನ್ನು ಹೆಚ್ಚು ವಿಸ್ತರಿಸಲು ಸಾಧ್ಯವಿದೆ. ಸಂಕಷ್ಟದಲ್ಲಿರುವ ಲಕ್ಷಾಂತರ ಜನರಿಗೆ ನೆರವು ಒದಗಿಸಲು ಸಾಧ್ಯವಾಗುತ್ತದೆ. ಹೊಸ ಹೊಸ ಆಲೋಚನೆಗಳ ಮುಖಾಂತರ ಸೇವಾ ವ್ಯಾಪ್ತಿ ವಿಸ್ತರಿಸಬೇಕಿದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಚಿಕ್ಕಮಗಳೂರಿನ ರೋಟರಿ ಸಂಸ್ಥೆಯ ಬಿ.ಆರ್.ಸಚ್ಚಿದಾನಂದ ಅವರು ರೋಟರಿ ಸಂಸ್ಥೆಯಿದ ನಮಗೇನು ಲಾಭ, ನಮ್ಮ ನಡವಳಿಕೆ ಮತ್ತು ಸೇವಾಕಾರ್ಯಗಳಲ್ಲಿ ನಮ್ಮ ಪಾತ್ರ ಮತ್ತು ಸಂಸ್ಥೆಗಳನ್ನು ಹೇಗೆ ನಡೆಸಬೇಕು ಎಂಬ ವಿಷಯ ಕುರಿತು ಮಾತನಾಡಿದರು. ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಮಂಜುನಾಥ್ ಕದಂ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಮುಖರಾದ ಎಂ.ಆರ್.ರಾಜೇದ್ರ ಪ್ರಸಾದ್, ಎಚ್.ಎಸ್.ಮೋಹನ್, ವಲಯ 10ರ ಸಹಾಯಕ ಗವರ್ನರ್ ಎಂ.ಪಿ.ಆನದಮೂರ್ತಿ, ವಸಂತ್ ಹೋಬ್ಳಿದಾರ್, ಜಿ.ವಿಜಯ್‌ಕುಮಾರ್, ರೋಟರಿ ಶಿವಮೊಗ್ಗ ಕಾರ್ಯದರ್ಶಿ ಸತೀಶ್‌ಚಂದ್ರ, ವೆಂಕಟೇಶ್, ಕೆ.ಪಿ.ಶೆಟ್ಟಿ, ಗುರುರಾಜ್, ರಾಜಶೇಖರ್, ಗಣೇಶ್ ಕಾಮತ್ ಮತ್ತಿತರರು ಉಪಸ್ಥಿತರಿದ್ದರು.
ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

CCTV SALES & SERVICE
9880074684
ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153