ಮಂಜುನಾಥ್ ಶೆಟ್ಟಿ…

ಶಾಸಕರ ಕಚೇರಿಯಾದ ಕರ್ತವ್ಯ ಭವನದಲ್ಲಿ ಶಾಸಕ ಚನ್ನಬಸಪ್ಪ ನೇತೃತ್ವದಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳ ಹಾಗೂ ಗುತ್ತಿಗೆದಾರರ ಪ್ರಗತಿ ಪರಿಶೀಲನಾ ಸಭೆ ನಡೆಯಿತು.ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದ ವಿವಿಧ ಬಡಾವಣೆಗಳಲ್ಲಿ ನಡೆಯುತ್ತಿರುವ ಕಾಮಗಾರಿಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದು ಗಮನಕ್ಕೆ ಬಂದಿದೆ. ಕುಂಟುನೆಪ ಹೇಳುವುದನ್ನು ಬಿಟ್ಟು ಕೂಡಲೇ ಕಾಮಗಾರಿಗಳನ್ನು ಚುರುಕುಗೊಳಿಸಬೇಕು ಎಂದು ತಾಕೀತು ಮಾಡಿದರು.

“ಮಳೆಗಾಲ ಆರಂಭವಾಗುವ ಮೊದಲೇ ರಸ್ತೆ ಮತ್ತು ಚರಂಡಿ ಕಾಮಗಾರಿಗಳು ಪೂರ್ಣಗೊಳ್ಳಬೇಕು. ಯಾವುದೇ ಬಡಾವಣೆಯಲ್ಲಿ ನೀರು ನಿಲ್ಲದಂತೆ ಅಥವಾ ಮ್ಯಾನ್‌ಹೋಲ್‌ಗಳಿಂದ ತೊಂದರೆಯಾಗದಂತೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮೇಲ್ವಿಚಾರಣೆ ನಡೆಸಬೇಕು,” ಎಂದು ಅವರು ಅಧಿಕಾರಿಗಳಿಗೆ ಆದೇಶಿಸಿದರು. ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳದಿದ್ದರೆ ಅಥವಾ ವಿಳಂಬ ಧೋರಣೆ ಮುಂದುವರಿಸಿದರೆ ಕಾನೂನು ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಮಹಾನಗರ ಪಾಲಿಕೆಯ ವಿವಿಧ ವಿಭಾಗಗಳ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಯೋಜನೆಯ ಗುತ್ತಿಗೆದಾರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *