ಮಂಜುನಾಥ್ ಶೆಟ್ಟಿ…

ಶಿವಮೊಗ್ಗ ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಉತ್ತಮ ಆಹಾರ ಸೌಲಭ್ಯ ಒದಗಿಸುವ ಮತ್ತು ಸ್ಥಳೀಯ ಯುವಕರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆ ರೂಪಿಸಿರುವ “ಮೊಬೈಲ್ ಕ್ಯಾಂಟೀನ್” ಯೋಜನೆಗೆ ಹಸಿರು ನಿಶಾನೆ ತೋರಿಸುವ ಮೂಲಕ ನೂತನ ಸಂಚಾರಿ ವಾಹನಗಳನ್ನು ಅಧಿಕೃತವಾಗಿ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ನಮ್ಮ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಯಾಗಬೇಕು ಮತ್ತು ಅದರ ಲಾಭ ಸ್ಥಳೀಯ ಯುವಕರಿಗೆ ಸಿಗಬೇಕು ಎನ್ನುವುದು ಸರ್ಕಾರದ ಆಶಯ. ಈ ಮೊಬೈಲ್ ಕ್ಯಾಂಟೀನ್‌ಗಳು ಪ್ರವಾಸಿಗರಿಗೆ ಮನೆಯೂಟದ ರುಚಿ ನೀಡುವುದರ ಜೊತೆಗೆ ಆರ್ಥಿಕ ಭದ್ರತೆಯನ್ನು ನೀಡಲಿದೆ. ಪ್ರವಾಸಿಗರಿಗೆ ಕೇವಲ ಆಹಾರ ನೀಡುವುದಷ್ಟೇ ಅಲ್ಲದೆ, ಪ್ರವಾಸಿ ತಾಣಗಳ ಪಾವಿತ್ರ್ಯತೆ ಮತ್ತು ಸ್ವಚ್ಛತೆಯನ್ನು ಕಾಪಾಡುವಂತೆ ಹಾಗೂ ಪ್ರವಾಸಿಗರಿಗೆ ಸೌಜನ್ಯದ ಸೇವೆ ನೀಡುವಂತೆ ಫಲಾನುಭವಿಗಳಿಗೆ ತಿಳಿ ಹೇಳಲಾಯಿತು.
ಈ ವೇಳೆ ಜಿಲ್ಲಾಧಿಕಾರಿ ಶ್ರೀ ಪ್ರಭುಲಿಂಗ ಕವಳಿಕಟ್ಟಿ ಜಿಡಿ ಮಂಜುನಾಥ್ ಸೇರಿದಂತೆ ಜನಪ್ರತಿನಿಧಿಗಳು, ಮುಖಂಡರುಗಳು, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಹಾಜರಿದ್ದರು.
