ಮಂಜುನಾಥ್ ಶೆಟ್ಟಿ…
ಶಿವಮೊಗ್ಗ ಟ್ರಾಫಿಕ್ ಪೊಲೀಸ್ ಸಿಪಿಐ ದೇವರಾಜ್ ಅವರು ನೇತೃತ್ವದಲ್ಲಿ ಶಿವಮೊಗ್ಗ ನಗರದ ಹೃದಯ ಭಾಗವಾಗಿರುವ ಕುವೆಂಪು ರಸ್ತೆ ಮತ್ತು ಪಾರ್ಕ್ ಬಡಾವಣೆಯ ರಸ್ತೆ ಹಾಗೂ ರಾಘವೇಂದ್ರ ಸ್ವಾಮಿ ಮಠದ ರಸ್ತೆಯಲ್ಲಿ ಸಾರ್ವಜನಿಕ ವಾಹನಗಳ ಸುಗಮ ಸಂಚಾರ ಮತ್ತು ಪಾದಚಾರಿಗಳ ಸುಲಭ ಸಂಚಾರವನ್ನು ಗಮನದಲ್ಲಿಟ್ಟುಕೊಂಡು, ರಸ್ತೆ ಹಾಗೂ ಪುಟ್‌ಪಾತ್ ಮೇಲೆ ಅಕ್ರಮವಾಗಿ ಇಡಲಾಗಿದ್ದ ಅಂಗಡಿಗಳು ಮತ್ತು ಜಾಹೀರಾತು ಫಲಕಗಳನ್ನು ಮಹಾನಗರ ಪಾಲಿಕೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಸಹಕಾರದಿಂದ ತೆರವುಗೊಳಿಸಿದರು.
ಅದೇ ಸಮಯದಲ್ಲಿ ಸದರಿ ರಸ್ತೆಯಲ್ಲಿ ದಿನ ಬಿಟ್ಟು ದಿನ (alternate day) ಪಾರ್ಕಿಂಗ್ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದ್ದು, ಅದರ ಪ್ರಕಾರವೇ ವಾಹನಗಳನ್ನು ಪಾರ್ಕಿಂಗ್ ಮಾಡಬೇಕು ಎಂದು ಸೂಚಿಸಲಾಯಿತು.ಹಾಗೂ ನಿಗದಿತ ಕನ್ಸರ್ವೆನ್ಸಿ ಪಾರ್ಕಿಂಗ್ ಸ್ಥಳಗಳಲ್ಲಿ ಮಾತ್ರ ವಾಹನಗಳನ್ನು ನಿಲ್ಲಿಸುವಂತೆ ಸ್ಥಳೀಯ ಸಾರ್ವಜನಿಕರು ಮತ್ತು ವ್ಯಾಪಾರಿಗಳಿಗೆ ಜಾಗೃತಿ ಮೂಡಿಸಲಾಯಿತು.
ವಾಹನ ಸವಾರರಿಗೆ ಕನ್ಸರ್ವೆನ್ಸಿ ಪಾರ್ಕಿಂಗ್ ವ್ಯವಸ್ಥೆಯ ಬಗ್ಗೆ ಸ್ಪಷ್ಟ ಮಾಹಿತಿ ದೊರಕುವಂತೆ, ಸಂಬಂಧಿತ ಸೂಚನಾ ಫಲಕಗಳನ್ನು ಸಹ ಅಳವಡಿಸಲಾಗಿದೆ. ಸಂದರ್ಭದಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗಳು ಮತ್ತು ಮಹಾನಗರ ಪಾಲಿಕೆಯ ಅಧಿಕಾರಿಗಳು ಉಪಸ್ಥಿತರಿದ್ದರು.