ಮಂಜುನಾಥ್ ಶೆಟ್ಟಿ…

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಏ.28 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.


ಈ ಉದ್ಯೋಗ ಮೇಳದಲ್ಲಿ ಆದಿಶಕ್ತಿ ಕಾರ‍್ಸ್ ಪ್ರೈ.ಲಿ., ನೆಕ್ಸ್ಚೆರ್ ಬಿಸಿನೆಸ್ ಸೆಲೂಷನ್ಸ್ ಪ್ರೈ.ಲಿ., ಕರಾವಳಿ ಟೀಚರ‍್ಸ್, ಸ್ವಮಾನ್ ಫೈನಾನ್ಸ್ ಪ್ರೈ.ಲಿ., ಮತ್ತು ಎಲ್ & ಟಿ ಫೈನಾನ್ಸ್ ಕಂಪನಿಗಳು ಭಾಗವಹಿಸಲಿದ್ದು, ತಮ್ಮಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ.

ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಮತ್ತು ಯಾವುದೇ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, 2ನೇ ಕ್ರಾಸ್, ಪಂಪನಗರ, ಸಾಗರ ರಸ್ತೆ, ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ಮೊಬೈಲ್ ಸಂಖ್ಯೆ 9380663606/ 9108235132 ಗಳನ್ನು ಸಂಪರ್ಕಿಸುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.