ಮಂಜುನಾಥ್ ಶೆಟ್ಟಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಮೇ.11 ರಿಂದ 10 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ಮತ್ತು ಮಹಿಳೆಯರಿಗೆ ಅಣಬೆ ಬೇಸಾಯ ಕುರಿತು ಉಚಿತ ತರಬೇತಿ ಶಿಬಿರವನ್ನು ಏರ್ಪಡಿಸಿದೆ.
ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 50 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಮತ್ತು ಮಹಿಳೆಯರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು.
ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.