ಮಂಜುನಾಥ್ ಶೆಟ್ಟಿ…
ವಿಶ್ವವಿದ್ಯಾಲಯವು ಏಕಾಏಕಿ ಪರೀಕ್ಷಾ ಶುಲ್ಕ ಹಾಗೂ ಪ್ರವೇಶ ಶುಲ್ಕವನ್ನು ಸಾವಿರಾರು ರೂಪಾಯಿ ಗಳಷ್ಟು ಹೆಚ್ಚಿಸಿರುವುದು ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳ ಪಾಲಿಗೆ ಮರಣ ಶಾಸನವಾಗಿದೆ. ಇದರ ಜೊತೆಗೆ ಡಿಜಿಟಲ್ ಮೌಲ್ಯಮಾಪನದಲ್ಲಿನ ತಾಂತ್ರಿಕ ಲೋಪಗಳಿಂದಾಗಿ ಫಲಿತಾಂಶಗಳಲ್ಲಿ ಗೊಂದಲ ಏರ್ಪಟ್ಟಿದ್ದು, ಪಾಸ್ ಆದವರು ಫೇಲ್ ಎಂದು ತೋರಿಸುತ್ತಿರುವುದು ವಿದ್ಯಾರ್ಥಿಗಳ ನಿದ್ದೆಗೆಡಿಸಿದೆ. ಈ ಅವ್ಯವಸ್ಥೆ ಸರಿಪಡಿಸಲು ವಿಫಲರಾಗಿರುವ ಕುಲಪತಿಗಳನ್ನು ಕೂಡಲೇ ವಜಾಗೊಳಿಸಬೇಕೆಂದು ಆಗ್ರಹಿಸಲಾಯಿತು.
ಪ್ರತಿಭಟನೆ ವೇಳೆ ಕುಲಪತಿ ಶರತ್ ಅನಂತಮೂರ್ತಿ ಅವರ ಕಚೇರಿಗೆ ಮುತ್ತಿಗೆ ಹಾಕಿದ ಕಾರ್ಯಕರ್ತರು, ಅಲ್ಲಿನ ಪೀಠೋಪಕರಣ ಹಾಗೂ ನಾಮಫಲಕಗಳನ್ನು ಕಿತ್ತೆಸೆದಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಬಂದ ಭದ್ರತಾ ಸಿಬ್ಬಂದಿಯನ್ನು ವಿದ್ಯಾರ್ಥಿಗಳು ತಡೆದಿದ್ದು, ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣ ವಾಗಿತ್ತು. ಎನ್.ಎಸ್.ಯು.ಐ ಜಿಲ್ಲಾಧ್ಯಕ್ಷ ವಿಜಯ್, ಕಾರ್ಯಾಧ್ಯಕ್ಷ ರವಿ ಕಟಿಕೆರೆ ಸೇರಿದಂತೆ ನೂರಾರು ಕಾರ್‍ಯಕರ್ತರು ಈ ಹೋರಾಟದಲ್ಲಿ ಪಾಲ್ಗೊಂಡು ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಒತ್ತಾಯಿಸಿದರು.
ಕಳೆದ ಐದು ತಿಂಗಳ ಹಿಂದೆ ನಡೆದ 1.3 ಮತ್ತು 5ನೇ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶ ಪ್ರಕಟಿಸದಿರುವುದು ಮತ್ತು ಕಳೆದ ಮೂರು ವರ್ಷಗಳಿಂದ ಪದವಿ ಅಂಕಪಟ್ಟಿಗಳನ್ನು ವಿತರಿಸದಿ ರುವುದು ವಿದ್ಯಾರ್ಥಿಗಳ ಆತಂಕಕ್ಕೆ ಕಾರಣವಾಗಿದೆ. ಅಂಕಪಟ್ಟಿ ಇಲ್ಲದೆ ಪದವೀಧರರು ಉನ್ನತ ವ್ಯಾಸಂಗಕ್ಕೆ ಹಾಗೂ ಉದ್ಯೋಗಕ್ಕೆ ಸೇರಲು ಪರದಾಡುವಂತಾಗಿದೆ. ಈ ಬಗ್ಗೆ ಹಲವು ಬಾರಿ ಮನವಿ ಮಾಡಿದರೂ ಕುಲಪತಿಗಳು ಸ್ಪಂದಿಸದೆ, ಕೇವಲ ಅಧಿಕಾರಿಗಳ ಆಂತರಿಕ ಕಚ್ಚಾಟದಲ್ಲಿ ಕಾಲಹರಣ ಮಾಡುತ್ತಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದರು.