ಮಂಜುನಾಥ್ ಶೆಟ್ಟಿ…

ಶಿವಮೊಗ್ಗ ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ಡಿಪ್ಲೊಮಾ ಪ್ರಥಮ ಸೆಮಿಸ್ಟರ್ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.


ಸಂಸ್ಥೆಯಲ್ಲಿ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಆಂಡ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟಿಸ್(ಕನ್ನಡ), ಕಮರ್ಷಿಯಲ್ ಪ್ರಾಕ್ಟಿಸ್(ಇಂಗ್ಲಿಷ್), ಅಪೆರಲ್ ಡಿಸೈನಿಂಗ್ ಫ್ಯಾಬ್ರಿಕೇಷನ್ ಟೆಕ್ನಾಲಜಿ ಕೋರ್ಸ್ಗಳು ಲಭ್ಯವಿದೆ.


ಅಭ್ಯರ್ಥಿಗಳು ಪ್ರವೇಶ ಪಡೆಯಲು ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ವರ್ಗಾವಣೆ ಪ್ರಮಾಣ ಪತ್ರ/ಎನ್‌ಓಸಿ, 05 ವರ್ಷದ ವ್ಯಾಸಂಗ ಪ್ರಮಾಣ ಪತ್ರ (ಕ್ಷೇತ್ರ ಶಿಕ್ಷಣಾಧಿಕಾರಿಗಳು ದೃಢೀಕರಿಸಿದ ಸಹಿಯೊಂದಿಗೆ), ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಹಾಗೂ 06 ಭಾವಚಿತ್ರಗಳೊಂದಿಗೆ ಮೇ 02 ರೊಳಗಾಗಿ ಸಲ್ಲಿಸುವುದು. ಪ್ರಾಂಶುಪಾಲರ ಹಂತದಲ್ಲಿಯೇ ಮೆರಿಟ್ ಹಾಗೂ ರೋಸ್ಟರ್‌ಗನುಗುಣವಾಗಿ ಆಯ್ಕೆ ಮಾಡಲಾಗುವುದು.

ಪ್ರವೇಶ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗೆ ಆರ್, ಸುನೀಲ್, ಮೊ.ಸಂ: 9480542763 ನ್ನು ಸಂಪರ್ಕಿಸಬಹುದೆAದು ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್‌ನ ಪ್ರಾಂಶುಪಾಲರು ತಿಳಿಸಿದ್ದಾರೆ.