ಮಂಜುನಾಥ್ ಶೆಟ್ಟಿ…

ಮೈಸೂರು ಜೆಎಸ್‌ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ಕಾಲೇಜು ವತಿಯಿಂದ ಅಖಿಲ ಭಾರತ ಮಟ್ಟದಲ್ಲಿ 2026-27 ನೇ ಸಾಲಿನ ಮೂರು ವರ್ಷಗಳ ಅವಧಿಯ ಡಿಪ್ಲೊಮಾ ಕೋರ್ಸ್ ಗಳ ಪ್ರವೇಶಕ್ಕೆ ವಿಶೇಷಚೇತನ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.


ಅನುದಾನಿತ ಕೋರ್ಸ್ ಗಳಲ್ಲಿ ಆರ್ಕಿಟೆಕ್ಚರ್ ಅಸಿಸ್ಟೆಂಟ್‌ಷಿಪ್, ಕಮರ್ಷಿಯಲ್ ಪ್ರಾಕ್ಟೀಸ್, ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ಹಾಗೂ ಅನುದಾನ ರಹಿತ ಕೋರ್ಸ್ ಗಳಲ್ಲಿ ಜ್ಯುಯಲರಿ ಡಿಸೈನ್ ಮತ್ತು ಟೆಕ್ನಾಲಜಿ, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್, ಕಂಪ್ಯೂಟರ್ ಅಪ್ಲಿಕೇಷನ್(ಫಾರ್ ವಿಜ್ಯುವಲಿ ಇಂಪೆರ‍್ಡ್), ಅಪಾರೇಲ್ ಡಿಸೈನ್ ಅಂಡ್ ಫ್ಯಾಬ್ರಿಕೇಷನ್ ಟೆಕ್ನಾಲಜಿ, ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಅಂಡ್ ಎಲೆಕ್ಟ್ರಿಕಲ್ ವೆಹಿಕಲ್ ಟೆಕ್ನಾಲಜಿ ಕೋರ್ಸ್ ಗಳು ಲಭ್ಯವಿದೆ.


ಅರ್ಜಿ ಸಲ್ಲಿಸಲು ಕರ್ನಾಟಕ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದು, ಶೇ.40 ರಷ್ಟು ಮೇಲ್ಪಟ್ಟ ಮೂಳೆ ಮತ್ತು ಕೀಲು ಅಂಗವಿಕಲತೆ, 60 ಡಿಬಿ ಮೇಲ್ಪಟ್ಟ ಕಿವುಡು ಮತ್ತು ಮೂಗು ಅಂಗವಿಕಲತೆ ಹಾಗೂ ಅಂಧತ್ವ-6/60 ಅಥವಾ 20/200 ಸ್ನೆಲೆನ್‌ಗಳನ್ನು ಲಕ್ಷಣವನ್ನು ಹೊಂದಿರಬೇಕು.
ಅರ್ಹ ವಿದ್ಯಾರ್ಥಿಗಳಿಗೆ ರಾಜ್ಯ ಮತ್ತು ರಾಷ್ಟ್ರಮಟ್ಟದ ವಿದ್ಯಾರ್ಥಿವೇತನದ ಆರ್ಥಿಕ ಸಹಾಯ ದೊರೆಯಲಿದೆ. ಪಾಲಿಟೆಕ್ನಿಕ್‌ನ ಯಶಸ್ವಿ ವಿದ್ಯಾರ್ಥಿಗಳಿಗೆ ಉದ್ಯೋಗ ಮತ್ತು ತರಬೇತಿ ಕೇಂದ್ರದ ಮೂಲಕ ಉದ್ಯೋಗಾವಕಾಶವನ್ನು ಕಲ್ಪಿಸಲಿದ್ದು, ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ವಿದ್ಯಾರ್ಥಿ ನಿಲಯವನ್ನು ಒದಗಿಸಲಾಗುತ್ತದೆ.


ನಿಗಧಿತ ನಮೂನೆ ಅರ್ಜಿಗಾಗಿ ಅರ್ಹ ವಿದ್ಯಾರ್ಥಿಗಳು ಜೆಎಸ್‌ಎಸ್ ವಿಶೇಷಚೇತರ ಪಾಲಿಟೆಕ್ನಿಕ್ ಕಾಲೇಜ್, ಜೆಎಸ್‌ಎಸ್ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಸಮುಚ್ಛಯ, ಮೈಸೂರು-570006 ಇಲ್ಲಿಂದ (ಸಾಮಾನ್ಯ ವರ್ಗದವರಿಗೆ ರೂ.100, ಎಸ್‌ಸಿ/ಎಸ್‌ಟಿ/ಸಿ-1 ವರ್ಗದವರಿಗೆ ರೂ.50)ನಗದು ಅಥವಾ ಡಿಡಿ ಮೂಲಕ ಮೈಸೂರಿನಲ್ಲಿ ಸಂದಾಯವಾಗುವಂತೆ ಜೂ.05 ರೊಳಗಾಗಿ ಕಳುಹಿಸಿ ಪಡೆಯಬಹುದು ಅಥವಾ ವೆಬ್‌ಸೈಟ್ www.jsspda.org ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ ಅಥವಾ ಮೊ.ಸಂ: 9844644937 ನ್ನು ಸಂಪರ್ಕಿಸಬಹುದು ಎಂದು ಜೆಎಸ್‌ಎಸ್ ವಿಶೇಷಚೇತನ ಪಾಲಿಟೆಕ್ನಿಕ್ ಪ್ರಾಂಶುಪಾಲರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *