ಮಂಜುನಾಥ್ ಶೆಟ್ಟಿ…

ಕುವೆಂಪು ವಿಶ್ವವಿದ್ಯಾನಿಲಯದ ಘಟಕ ಕಾಲೇಜಾದ ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ 2026-27ನೇ ಸಾಲಿಗೆ ಪ್ರಥಮ ಬಿ.ಎಸ್ಸಿ./ಬಿ.ಸಿ.ಎ. ಪದವಿಗೆ ಪ್ರವೇಶ ಪ್ರಕ್ರಿಯೆ ಆರಂಭವಾಗಿದ್ದು, ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.


ಬಿ.ಎಸ್ಸಿ. ಪದವಿಯಲ್ಲಿ 15 ವಿಷಯ ಸಮೂಹಗಳಿದ್ದು, ಆಸಕ್ತ ವಿದ್ಯಾಥಿಗಳು ಜಾಲತಾಣ https://uucms.karnataka.gov.in ರಲ್ಲಿ ಜೂ. 05 ರೊಳಗಾಗಿ ಅರ್ಜಿ ಸಲ್ಲಿಸುವುದು. ಪಿಯುಸಿಯಲ್ಲಿ ಶೇ. 60% ಕ್ಕಿಂತ ಹೆಚ್ಚು ಅಂಕಗಳಿಸಿದವರಿಗೆ ಮೊದಲ ಆದ್ಯತೆ ನೀಡಲಾಗುವುದು. ಬಿ.ಸಿ.ಎ. ಪದವಿ ಪ್ರವೇಶಕ್ಕೆ ಮೆರಿಟ್ ಆಧಾರದ ಮೇಲೆ ಪ್ರತ್ಯೇಕ ರ‍್ಯಾಂಕ್ ಪಟ್ಟಿ ಪ್ರಕಟಿಸಲಾಗುವುದು ಎಂದು ಕಾಲೇಜಿನ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-240435 ನ್ನು ಸಂಪಕಿಸುವುದು.

Leave a Reply

Your email address will not be published. Required fields are marked *