ಆತ್ಮೀಯ ಸ್ನೇಹಿತರು ಸಂಪುಟ ಸಹೋದ್ಯೋಗಿ ಶ್ರೀ ಡಿ. ಸುಧಾಕರ್ ಅವರು ಅಲ್ಪಕಾಲದ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದ ಸುದ್ದಿ ಅತೀವ ದುಃಖವನ್ನುಂಟು ಮಾಡಿದೆ. ಆದರೆ ಅವರೊಂದಿಗಿನ ನೆನಪುಗಳು ಅಮರ. ಸಾರ್ವಜನಿಕ ಸೇವೆಯಲ್ಲಿ ಅವರು ತೋರುತ್ತಿದ್ದ ನಿಷ್ಟೆ ಸರಳತೆ ಮತ್ತು ಸಾಮಾಜಿಕ ಕಳಕಳಿ ಅನನ್ಯವಾದುದು.

ನನ್ನ ಮತಕ್ಷೇತ್ರ ಸೊರಬ ತಾಲೂಕಿನ ಹುರುಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಉದ್ಯೋಗ ಖಾತ್ರಿ ಯೋಜನೆಯಡಿ ಕಾಂಪೌಂಡ್ ಹಾಗೂ ಅಡುಗೆ ಮನೆ ನಿರ್ಮಾಣದ ಶಂಕುಸ್ಥಾಪನೆಗೆ ಅತಿಥಿಯಾಗಿ ಆಗಮಿಸಿದ್ದ ಅವರು ಕೇವಲ ಅತಿಥಿಯಾಗಿ ಉಳಿಯದೇ, ಸ್ವತಃ ತಾವೇ ಮಣ್ಣು ಹೊತ್ತು ಶ್ರಮದಾನ ಮಾಡುವ ಮೂಲಕ ಎಲ್ಲರನ್ನೂ ಬೆರಗುಗೊಳಿಸಿದ್ದರು. ಒಬ್ಬ ಸಚಿವರಾಗಿ ಅವರ ನಿಸ್ವಾರ್ಥ ಶ್ರಮ ಮತ್ತು ಜನಸಾಮಾನ್ಯರ ಜೊತೆ ಬೆರೆಯುತ್ತಿದ್ದ ರೀತಿ ನಮ್ಮೆಲ್ಲರಿಗೂ ಮಾದರಿ.

ಜನಸೇವೆಯಲ್ಲಿ ಅಪಾರ ಕಾಳಜಿ ಹೊಂದಿದ್ದ ಸುಧಾಕರ್ ಅವರು ಇಂದು ದೈವಾಧೀನರಾಗಿರುವುದು ಇಡೀ ರಾಜ್ಯಕ್ಕೆ ತುಂಬಲಾರದ ನಷ್ಟ. ಅವರ ಜನಪರ ಕೆಲಸಗಳು ಸದಾ ಜೀವಂತ.

ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ಕುಟುಂಬ ವರ್ಗ, ಅಭಿಮಾನಿಗಳು ಹಾಗೂ ಅಪಾರ ಬಂಧುಗಳಿಗೆ ನೋವನ್ನು ಭರಿಸುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ.

ಸಂತಾಪಗಳೊಂದಿಗೆ

ಎಸ್. ಮಧು ಬಂಗಾರಪ್ಪ ಜಿಲ್ಲಾ ಉಸ್ತುವಾರಿ ಸಚಿವರು ಶಿವಮೊಗ್ಗ.

Leave a Reply

Your email address will not be published. Required fields are marked *