ಮಂಜುನಾಥ್ ಶೆಟ್ಟಿ…
ಕೇಂದ್ರ ಸರ್ಕಾರದ ಹೊಸ ಆದೇಶದ ಪ್ರಕಾರ, ವಾರ್ಷಿಕ 10 ಲಕ್ಷ ರೂಪಾಯಿಗಿಂತ ಹೆಚ್ಚು ಆದಾಯ ಹೊಂದಿರುವ ಕುಟುಂಬಗಳು ಇನ್ಮುಂದೆ ಎಲ್‌ಪಿಜಿ ಸಬ್ಸಿಡಿ ಪಡೆಯಲು ಅರ್ಹರಲ್ಲ. ಈ ಹಿಂದೆ ‘ಗಿವ್ ಇಟ್ ಅಪ್’ (Give It Up) ಅಭಿಯಾನದ ಮೂಲಕ ಸ್ವಯಂಪ್ರೇರಿತರಾಗಿ ಸಬ್ಸಿಡಿ ಬಿಟ್ಟುಕೊಡಲು ಕೋರಲಾಗಿತ್ತು, ಆದರೆ ಈಗ ಡಿಜಿಟಲ್ ತಂತ್ರಜ್ಞಾನ ಬಳಸಿ ಅನರ್ಹರನ್ನು ಗುರುತಿಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಹೊಸ ಡಿಜಿಟಲ್ ಪರಿಶೀಲನೆ ವ್ಯವಸ್ಥೆ ಅರ್ಹ ಫಲಾನುಭವಿಗಳನ್ನು ಪತ್ತೆಹಚ್ಚಲು ಸರ್ಕಾರವು ಅತ್ಯಾಧುನಿಕ ಡಿಜಿಟಲ್ ವ್ಯವಸ್ಥೆಯನ್ನು ಜಾರಿಗೆ ತಂದಿದೆ.
ಡೇಟಾ ಮ್ಯಾಚಿಂಗ್:..
ಗ್ಯಾಸ್ ಕನೆಕ್ಷನ್ ವಿವರಗಳನ್ನು ನೇರವಾಗಿ PAN ಕಾರ್ಡ್, ಆದಾಯ ತೆರಿಗೆ ರಿಟರ್ನ್ಸ್ (ITR) ಮತ್ತು ಕುಟುಂಬದ ಗುರುತಿನ ಚೀಟಿಗಳೊಂದಿಗೆ ಲಿಂಕ್ ಮಾಡಲಾಗುತ್ತಿದೆ.ಕುಟುಂಬದ ಒಟ್ಟು ಆದಾಯ ಕೇವಲ ಗ್ಯಾಸ್ ಕನೆಕ್ಷನ್ ಹೊಂದಿರುವ ವ್ಯಕ್ತಿಯ ಆದಾಯ ಮಾತ್ರವಲ್ಲದೆ, ಇಡೀ ಕುಟುಂಬದ ಒಟ್ಟು ವಾರ್ಷಿಕ ಆದಾಯವನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ.
ಗ್ಯಾಸ್ ಕಂಪನಿಗಳಿಂದ ಎಚ್ಚರಿಕೆ ಸಂದೇಶ (SMS) ಇತ್ತೀಚೆಗೆ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಸೇರಿದಂತೆ ಪ್ರಮುಖ ತೈಲ ಕಂಪನಿಗಳು ಗ್ರಾಹಕರಿಗೆ ಎಸ್‌ಎಂಎಸ್ ಕಳುಹಿಸುತ್ತಿವೆ. ಒಂದು ವೇಳೆ ನಿಮ್ಮ ಕುಟುಂಬದ ಆದಾಯ 10 ಲಕ್ಷ ಮೀರಿದ್ದರೆ, 7 ದಿನಗಳ ಒಳಗೆ ನಿಮ್ಮ ವಿವರಗಳನ್ನು ಅಪ್‌ಡೇಟ್ ಮಾಡುವಂತೆ ಸೂಚಿಸಲಾಗುತ್ತಿದೆ.