ಮಂಜುನಾಥ್ ಶೆಟ್ಟಿ…

ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಧೀನದಲ್ಲಿರುವ ‘ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ’ (ಕೆಎಸ್ ಟಿಎ)ವತಿಯಿಂದ “ಸುಧಾರಿತ ದತ್ತಾಂಶ ವಿಜ್ಞಾನ, ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಕಲಿಕೆ” (Advanced Data Science, Artificial Intelligence & Machine Learning) ಎಂಬ ವಿಷಯದ ಕುರಿತು ಮೂರು ದಿನಗಳ ವಿಶೇಷ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.


ಕಾರ್ಯಾಗಾರದ ವಿವರಗಳು…


ಮೇ 18 ರಿಂದ ಮೇ 20 ರವರೆಗೆ, ಅಕಾಡೆಮಿಯ ಕಚೇರಿ, ಪ್ರೊ. ಯು.ಆರ್. ರಾವ್ ವಿಜ್ಞಾನ ಭವನ, ಬನಶಂಕರಿ 2ನೇ ಹಂತ, ಬೆಂಗಳೂರು ಇಲ್ಲಿ‌ ಕಾರ್ಯಾಗಾರ ನಡೆಯಲಿದ್ದು, ವಿವಿಧ ಪ್ರತಿಷ್ಠಿತ ಸಂಸ್ಥೆಗಳ ಹೆಸರಾಂತ ವಿಜ್ಞಾನಿಗಳು ಮತ್ತು ತಂತ್ರಜ್ಞರು ಈ ಕಾರ್ಯಾಗಾರದಲ್ಲಿ ಉಪನ್ಯಾಸ ನೀಡಲಿದ್ದಾರೆ.
ವಿಜ್ಞಾನ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ವಿಷಯಗಳಲ್ಲಿ ಆಸಕ್ತಿ ಇರುವ ಪ್ರತಿನಿಧಿಗಳು ಈ ಕಾರ್ಯಾಗಾರದಲ್ಲಿ ಭಾಗವಹಿಸಲು ಅವಕಾಶವಿದೆ.


ಆಸಕ್ತರು ಗೂಗಲ್ ಫಾರ್ಮ್
https://forms.gle/Dyf9KFQ85hnRLDHH6) ಮೂಲಕ ಮೇ 16 ರೊಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕಾಗಿ ಕೋರಲಾಗಿದೆ.
ಕಾರ್ಯಾಗಾರದ ಕುರಿತು ಹೆಚ್ಚಿನ ಮಾಹಿತಿಗಾಗಿ ಸಂಯೋಜಕರಾದ ಶ್ರೀನಿವಾಸು ವಿ.ಕೆ., ಮೊಬೈಲ್: 9620767819 ಅವರನ್ನು ಸಂಪರ್ಕಿಸಬಹುದು ಅಥವಾ ಅಕಾಡೆಮಿಯ ಅಧಿಕೃತ ವೆಬ್‌ಸೈಟ್ https://kstacademy.in ವೀಕ್ಷಿಸಬಹುದು ಎಂದು ಅಕಾಡೆಮಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ. ಆನಂದ್ ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *