ಮಂಜುನಾಥ್ ಶೆಟ್ಟಿ…
ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯು ಭದ್ರಾವತಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿನ ವಿವಿಧ ವೃತ್ತಿಗಳಿಗೆ 2026-27ನೇ ಸಾಲಿನ ಎನ್.ಸಿ.ವಿ.ಟಿ. ಯೋಜನೆಯಡಿ ಐಟಿಐ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಮೇ 15 ರವರೆಗೆ ವಿಸ್ತರಿಸಲಾಗಿದೆ.
ಎಸ್.ಎಸ್.ಎಲ್.ಸಿ. ಪಾಸ್/ಫೇಲ್ ಆದ ವಿದ್ಯಾರ್ಥಿಗಳು ವೆಬ್‌ಸೈಟ್ www.cite.karnataka.gov.in ಮೂಲಕ ಮೇ 15 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.