ಮಂಜುನಾಥ್ ಶೆಟ್ಟಿ…

ಚಿತ್ರದುರ್ಗದ ಮಾದಾರ ಚೆನ್ನಯ್ಯ ಮೈದಾನದಲ್ಲಿ ಬಿಎಸ್ವೈ ಅಭಿಮಾನೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ನೆರೆದಿದ್ದ 10 ಲಕ್ಷಕ್ಕೂ ಅಧಿಕ ಅಭಿಮಾನಿಗಳ ಸಾಗರ, ಜನನಾಯಕ ಶ್ರೀ ಬಿ. ಎಸ್. ಯಡಿಯೂರಪ್ಪ ಅವರ ಮೇಲಿರುವ ಅಚಲವಾದ ಪ್ರೀತಿ ಮತ್ತು ಗೌರವಕ್ಕೆ ಸಾಕ್ಷಿಯಾಯಿತು.

ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ ಜೀ ಅವರ ಕಾರ್ಯಕ್ರಮ ಉದ್ಘಾಟಿಸಿ ನಂತರ ಮಾತನಾಡಿದ ಅವರು ನಾಡಿನ ಮೂಲೆ ಮೂಲೆಯಿಂದ ಬಂದ ರೈತ ಬಂಧುಗಳು ಮತ್ತು ಅಭಿಮಾನಿಗಳ ಯಡಿಯೂರಪ್ಪ ಕಾರ್ಯಕ್ರಮಕ್ಕೆ ಬಂದು ಅವರಿಗೆ ಎಲ್ಲಾ ರೀತಿಯ ಸಹಕಾರ ನೀಡಿದ್ದಾರೆ ಎಂದರು. ಸಾಕ್ಷಿಯಾಗಿ “ಬಿಎಸ್‌ವೈ ಅಭಿಮಾನೋತ್ಸವ” ಅತ್ಯಂತ ಯಶಸ್ವಿಯಾಗಿ ಬಿಎಸ್ವೈ ಅವರ 50 ವರ್ಷಗಳ ಸಾರ್ಥಕ ಸೇವೆಗೆ ಸಂದ ಅತಿದೊಡ್ಡ ಗೌರವ ಇದಾಗಿದೆ ಎಂದರು.

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಬಿ. ಎಲ್.‌ ಸಂತೋಷ್‌̧ ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಎಸ್.‌ ಬೊಮ್ಮಾಯಿ, ಶ್ರೀ ಡಿ. ವಿ. ಸದಾನಂದ ಗೌಡ, ಶ್ರೀ ಜಗದೀಶ್‌ ಶೆಟ್ಟರ್‌, ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್‌ ಜೋಶಿ, ಶ್ರೀ ವಿ. ಸೋಮಣ್ಣ, ಕು. ಶೋಭಾ ಕರಂದ್ಲಾಜೆ, ಪ್ರತಿಪಕ್ಷ ನಾಯಕರಾದ ಶ್ರೀ ಆರ್.‌ ಅಶೋಕ್‌, ವಿಧಾನ ಪರಿಷತ್‌ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ, ವಿವಿಧ ಮಠಾಧೀಶರುಗಳು, ಸಂಸದರು, ಶಾಸಕರು ಮತ್ತು ಪ್ರಮುಖರು ಉಪಸ್ಥಿತರಿದ್ದರು.

ಈ ಐತಿಹಾಸಿಕ ಸಮಾರಂಭದಲ್ಲಿ ಭಾಗವಹಿಸಿದ ಪ್ರತಿಯೊಬ್ಬರಿಗೂ ನನ್ನ ಹೃದಯಪೂರ್ವಕ ಕೃತಜ್ಞತೆಗಳು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ಶಿವಮೊಗ್ಗ ಸಂಸದರಾದ ಬಿ ವೈ ರಾಘವೇಂದ್ರ ತಿಳಿಸಿದರು.

Leave a Reply

Your email address will not be published. Required fields are marked *