ಮಂಜುನಾಥ್ ಶೆಟ್ಟಿ…

ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಶಿವಮೊಗ್ಗ ಜಿಲ್ಲೆಯ 2023ರ ನಂತರ ಸ್ನಾತಕೋತ್ತರ ಪದವಿ/ ಪದವಿ/ ಡಿಪ್ಲೋಮಾ ಪಡೆದ ಅರ್ಹ ನಿರುದ್ಯೋಗಿಗಳು ಪದವಿ ಪಡೆದು 6 ತಿಂಗಳಾದರೂ ಉದ್ಯೋಗ ಪಡೆಯದವರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.


ಜಿಲ್ಲೆಯ ಫಲಾನುಭವಿಗಳು ತ್ರೈಮಾಸಿಕ ಬದಲಾಗಿ ಪ್ರತಿ ತಿಂಗಳು 25ರೊಳಗಾಗಿ ಕಡ್ಡಾಯವಾಗಿ ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಸ್ವಯಂ ಘೋಷಣೆ ನೀಡಬೇಕು. ಇಲ್ಲದಿದ್ದಲ್ಲಿ ಆ ತಿಂಗಳ ನೇರ ನಗದು ಖಾತೆಗೆ ಜಮಾ ಆಗುವುದಿಲ್ಲ. ಪ್ರತಿ ತಿಂಗಳು ಪದವೀಧರರಿಗೆ ರೂ. 3000/- ಹಾಗೂ ಡಿಪ್ಲೋಮಾದಾರರಿಗೆ ರೂ. 1500/- ನಿರುದ್ಯೋಗ ಭತ್ಯೆ ನೀಡಲಾಗುವುದು.

Leave a Reply

Your email address will not be published. Required fields are marked *