ಮಂಜುನಾಥ್ ಶೆಟ್ಟಿ…
ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಮೇ 27 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.
ಈ ಸಂದರ್ಶನದಲ್ಲಿ ಖಾಸಗಿ ಪ್ರತಿಷ್ಠಿತ ಕಂಪನಿಯಾದ ಶ್ರೀಲಕ್ಷ್ಮೀ ಗ್ರೂಪ್ಸ್ , ಹೆಚ್.ಡಿ.ಎಫ್.ಸಿ. ಬ್ಯಾಂಕ್, ಸಮೃದ್ಧಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ, ಎಲ್ &ಟಿ ಫೈನಾನ್ಸ್, ರೇಜ್ ಮ್ಯಾನೇಜ್ಮೆಂಟ್ ಸಲ್ಯೂಷನ್ ಸಂಸ್ಥೆಗಳು ಭಾಗವಹಿಸಲಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ.
ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೊಮಾ ಮತ್ತು ಯಾವುದೇ ಪದವಿ ಪೂರೈಸಿದ, 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಸಂದರ್ಶನಕ್ಕೆ ಬರುವವರು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಹಾಜರಾಗುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ನೇರ ಸಂದರ್ಶನಕ್ಕೆ ಪ್ರವೇಶ ಉಚಿತವಾಗಿದೆ.