ಮಂಜುನಾಥ್ ಶೆಟ್ಟಿ…
ಟ್ರಾಫಿಕ್ ಸಿಪಿಐ ದೇವರಾಜ್ ನೇತೃತ್ವದಲ್ಲಿ ನಗರದ ಬಿ.ಹೆಚ್. ರಸ್ತೆಗೆ ಹೊಂದಿಕೊಂಡಿರುವ ಗಾರ್ಡನ್ ಏರಿಯಾದ ಗುಜರಿ ಕ್ರಾಸ್ ಹಾಗೂ ಅದರ ಸುತ್ತಮುತ್ತಲಿನ ರಸ್ತೆ ಮತ್ತು ಪಾದಚಾರಿ ಮಾರ್ಗಗಳಲ್ಲಿ ಫುಟ್ ಪಾತ್ ತೆರವು ಕಾರ್ಯಚರಣೆ ಮಾಡಲಾಯಿತು.
ಸಾರ್ವಜನಿಕ ವಾಹನಗಳ ಸುಗಮ ಸಂಚಾರ ಹಾಗೂ ಪಾದಚಾರಿಗಳ ಸುರಕ್ಷಿತ ಸಂಚಾರಕ್ಕೆ ಅಡಚಣೆಯಾಗುವ ರೀತಿಯಲ್ಲಿ ಇಡಲಾಗಿದ್ದ ಕಬ್ಬಿಣದ ವಸ್ತುಗಳು, ಟೈರ್‌ಗಳು ಹಾಗೂ ಇತರೆ ಗುಜರಿ ಸಾಮಗ್ರಿಗಳನ್ನು ತೆರವುಗೊಳಿಸಿ, ವಾಹನ ಹಾಗೂ ಪಾದಚಾರಿಗಳ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಯಿತು.
ಈ ಸಂದರ್ಭದಲ್ಲಿ ಗುಜರಿ ಅಂಗಡಿ ಮಾಲೀಕರಿಗೆ ರಸ್ತೆ ಮತ್ತು ಪಾದಚಾರಿ ಮಾರ್ಗಗಳಲ್ಲಿ ಯಾವುದೇ ರೀತಿಯ ಗುಜರಿ ವಸ್ತುಗಳನ್ನು ಇಡಬಾರದು ಎಂದು ಸೂಚನೆ ನೀಡಲಾಯಿತು.ಮುಂದೆಯೂ ಈ ಸೂಚನೆಯನ್ನು ಉಲ್ಲಂಘಿಸಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳುವಳಿಕೆ ನೀಡಲಾಯಿತು.