ಮಂಜುನಾಥ್ ಶೆಟ್ಟಿ…
ವಿಶ್ವ ಪರಿಸರ ದಿನಾಚರಣೆಯನ್ನು ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ನೇತೃತ್ವದಲ್ಲಿ ನಡೆಯಿತು. ನಗರದ ಡಿಎಆರ್ ಮೈದಾನದಲ್ಲಿ ಪೊಲೀಸ್ ವಸತಿ ಸಮುದಾಯ ಬಳಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಗಿಡ ನೆಡುವ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಅವರು ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ ಎಂದರು.ಇಂದಿನ ಯುವ ಪೀಳಿಗೆ ಪರಿಸರ ಸಂರಕ್ಷಣಾ ವಿಷಯವನ್ನು ತಿಳಿದುಕೊಳ್ಳಬೇಕು.ಜೊತೆಗೆ ಪರಿಸರವನ್ನು ಸಂರಕ್ಷಿಸುವುದು ಕರ್ತವ್ಯ ನಿರ್ವಹಿಸಬೇಕು ಎಂದರು.
ಈ ಸಂದರ್ಭದಲ್ಲಿ ಎಎಸ್ ಪಿ ಕಾರಿಯಪ್ಪ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.