ಮಂಜುನಾಥ್ ಶೆಟ್ಟಿ…
ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಪರಿಷತ್ (ಐಸಿಸಿಆರ್) ಹಾಗೂ ಕರ್ನಾಟಕ ಸರ್ಕಾರದ ನಡುವಿನ ಒಡಂಬಡಿಕೆಯಂತೆ ವಿದೇಶಗಳಿಗೆ ಹಾಗೂ ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರಗಳಿಗೆ ಕಲಾತಂಡಗಳನ್ನು ಕಳುಹಿಸಲು ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಜಿಲ್ಲೆಯ ಅರ್ಹ ಕಲಾವಿದರು ಮತ್ತು ಕಲಾತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಂಸ್ಕೃತಿ, ಕಲೆ ಹಾಗೂ ಶಿಕ್ಷಣಕ್ಕೆ ಸಂಬಂಧಿಸಿದಂತೆ ಮಾಡಿಕೊಳ್ಳಲಾಗಿರುವ ಈ ಒಡಂಬಡಿಕೆಯನ್ವಯ, ಐಸಿಸಿ ಆರ್ ಸಂಸ್ಥೆಯ ವತಿಯಿಂದ ರಾಜ್ಯ ಸರ್ಕಾರದ ಸಾಂಸ್ಕೃತಿಕ ಕಲಾತಂಡಗಳನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ವಿವಿಧ ಸಾಂಸ್ಕೃತಿಕ ಉತ್ಸವ ಹಾಗೂ ಕಾರ್ಯಕ್ರಮಗಳಿಗೆ ಕಳುಹಿಸಿಕೊಡಲಾಗುತ್ತದೆ. ಈ ಮೂಲಕ ಕಲಾತಂಡಗಳು ಹಾಗೂ ಕಲಾವಿದರನ್ನು ಎಂಪ್ಯಾನಲ್ ಮಾಡಿ ಅವರ ಪ್ರತಿಭೆಯನ್ನು ಹೆಚ್ಚು ಪ್ರಚುರಪಡಿಸಲು ಅವಕಾಶ ಕಲ್ಪಿಸಲಾಗುತ್ತಿದೆ.
ಆದ್ದರಿಂದ, ಜಿಲ್ಲೆಯಲ್ಲಿರುವ ಆಸಕ್ತ ಕಲಾವಿದರು ಹಾಗೂ ಕಲಾತಂಡಗಳು ನಿಗದಿತ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಆಯಾ ಜಿಲ್ಲಾ ಸಹಾಯಕ ನಿರ್ದೇಶಕರ ಕಚೇರಿಗೆ ದಿನಾಂಕ: 12.06.2026 ರೊಳಗಾಗಿ ಸಲ್ಲಿಸಿ ನೋಂದಾಯಿಸಿಕೊಳ್ಳಬೇಕು.
ಅರ್ಜಿ ನಮೂನೆಯನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್ www.kannadasiri.karnataka.gov.in ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶಿವಮೊಗ್ಗ ಜಿಲ್ಲಾ ಸಹಾಯಕ ನಿರ್ದೇಶಕ ಉಮೇಶ್ ಹೆಚ್ ಪ್ರಕಟಣೆಯಲ್ಲಿ ಕೋರಿದ್ದಾರೆ.