ಮಂಜುನಾಥ್ ಶೆಟ್ಟಿ…

ಶಿವಮೊಗ್ಗ ನಗರದ ಅಂಬೇಡ್ಕರ್ ಭವನದಲ್ಲಿ ಶಾಲಾ ಶಿಕ್ಷಣ ಇಲಾಖೆ, ಪ್ರಾದೇಶಿಕ ಸಾರಿಗೆ ಇಲಾಖೆ ಹಾಗೂ ಶಿವಮೊಗ್ಗ ನಗರ ಸಂಚಾರ ಪೊಲೀಸ್ ಠಾಣೆ ಇವರ ಸಂಯುಕ್ತಾಶ್ರಯದಲ್ಲಿ ಶಾಲಾ ಶುಲ್ಕ ಪಾರದರ್ಶಕತೆ, ನಿಯಮ ಪಾಲನೆ, ರಸ್ತೆ ಸುರಕ್ಷತೆ ಹಾಗೂ ಸಂಚಾರ ನಿಯಮಗಳ ಕುರಿತು ಮಾಹಿತಿ ಕಾರ್ಯಗಾರ ನಡೆಯಿತು.


ಕಾರ್ಯಗಾರದಲ್ಲಿ ಸಂಚಾರಿ ಸಿಪಿಐ ದೇವರಾಜ್ ಮಾತನಾಡಿ ಶಿವಮೊಗ್ಗ ತಾಲ್ಲೂಕಿನ ಎಲ್ಲಾ ಅನುದಾನ ರಹಿತ ಶಾಲೆಗಳ ಮುಖ್ಯಸ್ಥರಿಗೆ ಶಾಲಾ ವಾಹನಗಳಲ್ಲಿ ಪ್ರಯಾಣಿಸುವ ಮಕ್ಕಳ ಸುರಕ್ಷತೆ ಕುರಿತು ಮಾನ್ಯ ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳನ್ನು PPT ಮೂಲಕ ವಿವರಿಸಿ, ಶಾಲಾ ವಾಹನಗಳ ಸುರಕ್ಷತಾ ನಿಯಮಗಳು ಹಾಗೂ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಕುರಿತು ಜಾಗೃತಿ ಮೂಡಿಸಲಾಯಿತು.

Leave a Reply

Your email address will not be published. Required fields are marked *