ವರದಿ ಮಂಜುನಾಥ್ ಶೆಟ್ಟಿ…
ಶಿವಮೊಗ್ಗದಲ್ಲಿ ನಡೆದ ರೌಡಿಶೀಟರ್ ನರಸಿಂಹ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳು ಕೋಟೆ ಪೊಲೀಸ್ ಠಾಣೆಗೆ ಶರಣಾಗಿದ್ದು, ಪೊಲೀಸರು ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಬಂಧಿತ ಆರೋಪಿಗಳನ್ನು ಅಂಬು ಅಲಿಯಾಸ್ ಅನಿಲ್, ಮಧು, ಕತ್ತೆ ಕಾರ್ತಿಕ್, ರವಿ ಹಾಗೂ ಶಬರೀಶ್ ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ಶಿವಮೊಗ್ಗ ಕೋಟೆ ಠಾಣೆಯ ಪಿಐ ಹರೀಶ್ ಪಾಟೀಲ್ ಮತ್ತು ಪಿಎಸ್ಐ ಸಂತೋಷ್ ಬಹೊಜಿ ನೇತೃತ್ವದಲ್ಲಿ ಕರೆತಂದು ವಶಕ್ಕೆ ಪಡೆದು ತನಿಖೆ ಮುಂದುವರಿಸಲಾಗಿದೆ.
ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿತ್ತು. ತಂಡ ಕಾರ್ಯಾಚರಣೆ ಆರಂಭಿಸಿದ 24 ಗಂಟೆಗಳೊಳಗೆ ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದೆ.
ಪ್ರಕರಣ ಸಂಬಂಧ ಬಂಧಿತ ಐವರ ವಿರುದ್ಧ ಕಾನೂನು ಕ್ರಮ ಮುಂದುವರಿದಿದ್ದು, ಹತ್ಯೆಯ ಹಿಂದಿನ ನಿಖರ ಕಾರಣ ಹಾಗೂ ಇತರ ಆರೋಪಿಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.