ವರದಿ ಮಂಜುನಾಥ್ ಶೆಟ್ಟಿ…

ಶಿವಮೊಗ್ಗದ ರವೀಂದ್ರ ನಗರದ ಮನೆಯೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಮತ್ತು ಸಾಕುನಾಯಿ ಮೃತದೇಹ ಪತ್ತೆಯಾಗಿದೆ.ಜನವಾರ್ತೆ ಪತ್ರಿಕೆಯ ಸಂಪಾದಕ ನಾಗರಾಜ್ ಅವರ ಪತ್ನಿ ಪ್ರಭಾವತಿ ಮನೆಯಲ್ಲಿ ಸಾವನ್ನಪ್ಪಿದ್ದು ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ನಾಯಿ ಕೂಡ ಸತ್ತಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ನಾಗರಾಜ್ ರವರಿಗೆ ಮೂವರು ಹೆಣ್ಣು ಮಕ್ಕಳು ಮದುವೆಯಾಗಿ ಬೇರೆ ಇದ್ದಾರೆ ಎನ್ನಲಾಗಿದ್ದು ಎಂಬ ಮಾಹಿತಿ ಲಭ್ಯವಾಗಿದೆ.ನೆರೆಹೊರೆಯವರು ದುರ್ವಾಸನೆ ಬರುತ್ತಿದೆ ಎಂದು ಪೊಲೀಸ್ ಠಾಣೆಗೆ ದೂರು ನೀಡಿದ ಹಿನ್ನೆಲೆಯಲ್ಲಿ ಜಯನಗರ ಪಿಐ ರವಿ ಸಂಗಣ್ಣ ಪಾಟೀಲ್ ನೇತೃತ್ವದಲ್ಲಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದಾಗ ಈ ದೃಶ್ಯ ಕಂಡು ಬಂದಿದೆ.ಸ್ಥಳ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *