ಮಂಜುನಾಥ್ ಶೆಟ್ಟಿ…
ಎ.ಐ.ಸಿ.ಸಿ ಅಧ್ಯಕ್ಷರು ಹಾಗೂ ಹಿರಿಯ ನಾಯಕರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಯವರು ಕರ್ನಾಟಕದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಅವರನ್ನು ಸಾಗರ ಶಾಸಕರಾದ ಗೋಪಾಲಕೃಷ್ಣ ಬೇಳೂರು ಭೇಟಿಯಾಗಿ ಶುಭ ಹಾರೈಸಿದರು.
ಈ ಸಂಧರ್ಭದಲ್ಲಿ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಶ್ರೀ ಆರ್.ಎಂ ಮಂಜುನಾಥ್ ಗೌಡರವರು ಹಾಗೂ ಸಾಗರ ತಾಲ್ಲೂಕಿನ ಕಾಂಗ್ರೆಸ್ ಪಕ್ಷದ ಸ್ಥಳೀಯ ಮುಖಂಡರುಗಳು ಉಪಸ್ಥಿತರಿದ್ದರು.