ಮಂಜುನಾಥ್ ಶೆಟ್ಟಿ…
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ತುಳುಕೂಟ ಭದ್ರಾವತಿ ವತಿಯಿಂದ ತುಳುಉತ್ಸವ 2026 ವಿಶೇಷ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು ತನ್ನದೇ ಆದ ಪರಂಪರೆ ಇರುವ ತುಳು ಭಾಷೆಯ ಬೆಳವಣಿಗೆಗೆ ನಿರಂತರ ಹೋರಾಟ ನಡೆಸಲಾಗುತ್ತಿದೆ. ಕಾಡಿನ ಎಲ್ಲೆಡೆ ತುಳು ಭಾಷೆಯ ಕುರಿತು ಜಾಗೃತಿ ಮೂಡಿಸುವ ಅಗತ್ಯವಿದೆ ಎಂದರು.
ಈ ಭಾಷೆಯನ್ನು ಪ್ರಾಥಮಿಕ ಹಂತದಿಂದಲೇ ಮಕ್ಕಳಿಗೆ ಕಲಿಸುವ ನಿಟ್ಟಿನಲ್ಲಿ ಪ್ರಯತ್ಸಬೇಕಾಗಿದೆ. ಈ ನಿಟ್ಟಿನಲ್ಲಿ ಹೋರಾಟ ನಡೆಸಿದ ಪರಿಣಾಮ ಸರ್ಕಾರ ತುಳಿನಾಡಿನ ಭಾಗದ ಶಾಲೆಗಳಲ್ಲಿ ತುಳು ಭಾಷೆಯನ್ನು ಒಂದು ಆಯ್ಕೆ ಭಾಷೆನಾಗಿಸಿದೆ ಎಂದರು.
ಕಾರ್ಯಕ್ರಮದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದಿಸಿ ಪ್ರೋತ್ಸಾಹಿಸಲಾಯಿತು.
ತುಳುಕುಟದ ಅಧ್ಯಕ್ಷ ಸುಧಾಕರ್ ಶೆಟ್ಟಿ ಡಿ ಮಂಜುನಾಥ್ ಕುಂಬ್ರ ದುರ್ಗಾ ಪ್ರಸಾದ್ ರೈ ಡಾ ದೇಲಂತ ಬೆಟ್ಟು ಆನಂದ್ ನಾರಾಯಣ ಪೂಜಾರಿ ಸುಬ್ಬಣ್ಣ ರೈ ಶಾಮರಾಯ ಆಚಾರ್ ಪ್ರಕಾಶ್ ಪಿಂಟೋ ಮತ್ತು ಇನ್ನಿತರ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.