ಮಂಜುನಾಥ ಶೆಟ್ಟಿ…

ಶಿವಮೊಗ್ಗ ನಗರದ ಹೃದಯಭಾಗದಲ್ಲಿರುವ ಖಾಸಗಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಎದುರಿಸುತ್ತಿರುವ ಮೂಲ ಸೌಕರ್ಯಗಳ ಕೊರತೆ, ಪ್ರಸ್ತುತ ಇರುವ ಅವ್ಯವಸ್ಥೆಗಳು ಹಾಗೂ ನಗರದಾದ್ಯಂತ ಪ್ರಗತಿಯಲ್ಲಿರುವ ಸ್ಮಾರ್ಟ್ ಸಿಟಿ ಕಾಮಗಾರಿಗಳ ಸಮರ್ಪಕ ನಿರ್ವಹಣೆಗೆ ಸಂಬಂಧಿಸಿದಂತೆ ಸಾರ್ವಜನಿಕರು ಹಾಗೂ ಶಿವಮೊಗ್ಗ ನಾಗರೀಕ ಹಿತರಕ್ಷಣ ವೇದಿಕೆಗಳ ಒಕ್ಕೂಟದಿಂದ ಶಾಸಕರಾದ ಚನ್ನಬಸಪ್ಪ ರವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ನಾಗರಿಕರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳ ಕುರಿತು ನಿಯೋಗದೊಂದಿಗೆ ಸಮಾಲೋಚನೆ ನಡೆಸಿ, ಅವರು ಸಿದ್ಧಪಡಿಸಿದ ಸವಿಸ್ತಾರವಾದ ಮನವಿಯನ್ನು ಸ್ವೀಕರಿಸಲಾಯಿತು. ಸಾರ್ವಜನಿಕರ ಸುಗಮ ಜೀವನಶೈಲಿ ಮತ್ತು ನಗರದ ಸುಂದರ ಭವಿಷ್ಯದ ದೃಷ್ಟಿಯಿಂದ ಅವರು ನೀಡಿರುವ ಪ್ರತಿಯೊಂದು ಸಕಾರಾತ್ಮಕ ಸಲಹೆಗಳು ಹಾಗೂ ಅಹವಾಲುಗಳನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗಿದ್ದು, ಈ ಕುರಿತು ಸಂಬಂಧಪಟ್ಟ ಇಲಾಖೆಗಳ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ ತ್ವರಿತವಾಗಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು.

ಈ ಪ್ರಮುಖ ಭೇಟಿಯ ಸಂದರ್ಭದಲ್ಲಿ ಶಿವಮೊಗ್ಗ ನಾಗರಿಕ ಹಿತ ರಕ್ಷಣಾ ವೇದಿಕೆಯ ಸದಸ್ಯರು ಹಾಗೂ ನಾಗರೀಕ ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *