ಮಂಜುನಾಥ ಶೆಟ್ಟಿ…
ಶಿವಮೊಗ್ಗದ ಜಯನಗರ ಹಾಗೂ ಸೈಬರ್ ಪೊಲೀಸ್ ಠಾಣೆಗಳ ಸಂಯುಕ್ತ ಆಶ್ರಯದಲ್ಲಿ ಜಯನಗರ ಪೊಲೀಸ್ ಠಾಣೆಯಲ್ಲಿ ರಕ್ತದಾನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ನ 107 ನೇ ಸ್ವಯಂಪ್ರೇರಿತ ರಕ್ತದಾನ ಶಿಬಿರದಲ್ಲಿ 18 ಜನ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ರಕ್ತದಾನ ಮಾಡಿದರು.
ಶಿಬಿರದಲ್ಲಿ ಪಾಲ್ಗೊಂಡು ರಕ್ತದಾನ ಮಾಡಿದ ಎಲ್ಲಾ ಆರಕ್ಷಕ ರಕ್ತದಾನಿಗಳಿಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಅಭಿನಂದನೆ ತಿಳಿಸಿದರು.