ಮಂಜುನಾಥ ಶೆಟ್ಟಿ…

ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಇದರ ಅನ್ವಯ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ರಾಜಕೀಯ ಪಕ್ಷಗಳ ಮತಗಟ್ಟೆ ಏಜೆಂಟರುಗಳಿಗೆ ಕಾರ್ಯಾಗಾರವೊಂದನ್ನು ಆಯೋಜಿಸಲಾಗಿದೆ.


113-ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಮಾನ್ಯತೆ ಪಡೆದ ಎಲ್ಲಾ ರಾಜಕೀಯ ಪಕ್ಷಗಳ ಮತಗಟ್ಟೆ ಏಜೆಂಟರುಗಳಿಗಾಗಿ ದಿನಾಂಕ 24-06-2026ರ ಬುಧವಾರ ಬೆಳಿಗ್ಗೆ 11:00 ಗಂಟೆಗೆ ನಗರದ ಕುವೆಂಪು ರಂಗ ಮಂದಿರದಲ್ಲಿ ಈ ಕಾರ್ಯಾಗಾರ ನಡೆಯಲಿದೆ.


ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರು ಹಾಗೂ 113-ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ಜರುಗಲಿದ್ದು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ ಕುರಿತು ವಿವರವಾದ ಮಾಹಿತಿ ನೀಡಲಾಗುತ್ತದೆ.


ಸಂಬಂಧಪಟ್ಟ ಎಲ್ಲಾ ರಾಜಕೀಯ ಪಕ್ಷಗಳ ಮತಗಟ್ಟೆ ಏಜೆಂಟರುಗಳು ಈ ಕಾರ್ಯಾಗಾರಕ್ಕೆ ತಪ್ಪದೇ ಹಾಜರಾಗಬೇಕಾಗಿ ಶಿವಮೊಗ್ಗ ಮಹಾನಗರ ಪಾಲಿಕೆಯ ಉಪಆಯುಕ್ತರು (ಆಡಳಿತ) ಪ್ರಕಟಣೆಯಲ್ಲಿ ಕೋರಿದ್ದಾರೆ.

Leave a Reply

Your email address will not be published. Required fields are marked *