ಮಂಜುನಾಥ ಶೆಟ್ಟಿ…

ಸಿ.ಎಸ್.ಷಡಾಕ್ಷರಿ ಅವರು ಜೂನ್‌ 18ರಂದು ಶಿವಮೊಗ್ಗದ ರಾಜ್ಯ ಲೆಕ್ಕಪರಿಶೋಧನಾ ಮತ್ತು ಲೆಕ್ಕಪತ್ರ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಖಾಲಿ ಇದ್ದ ಉಪನಿರ್ದೇಶ ಹುದ್ದೆಯ ಅಧಿಕಾರ ವಹಿಸಿಕೊಂಡರು.

ಈ ಹ

ಿಂದೆ ಶಿವಮೊಗ್ಗದ ಲೆಖ್ಖಪರಿಶೋಧನಾ ವರ್ತುಲ ಇಲಾಖೆಯಲ್ಲಿ ಲೆಖ್ಖ ಅಧೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿದ್ದ ಸಿ.ಎಸ್.ಷಡಾಕ್ಷರಿ ಅವರು 2023ರಲ್ಲಿ ಶಿವಮೊಗ್ಗದಿಂದ ವರ್ಗಾವಣೆಗೊಂಡು ಬೆಂಗಳೂರಿನ ಉಚ್ಛನ್ಯಾಯಾಲಯ ಮತ್ತು ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ್ದರು.


ಪ್ರಸ್ತುತ ಸಿ.ಎಸ್.ಷಡಾಕ್ಷರಿ ಅವರು ಸರ್ಕಾರದ ವರ್ಗಾವಣೆ ಆದೇಶದಂತೆ ಶಿವಮೊಗ್ಗಕ್ಕೆ ಮರಳಿ ಕರ್ತವ್ಯದ ಮೇಲೆ ಹಾಜರಾಗಿರುವುದು ರಾಜ್ಯ ಸರ್ಕಾರಿ ನೌಕರರಲ್ಲಿ ಸಂತಸ ಮೂಡಿದೆ. ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ನೌಕರರು ಸಿ.ಎಸ್.ಷಡಾಕ್ಷರಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡು ಸಂಭ್ರಮಿಸಿದರು.

Leave a Reply

Your email address will not be published. Required fields are marked *