ಮಂಜುನಾಥ ಶೆಟ್ಟಿ…

2026-27ನೇ ಸಾಲಿನ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ವಿಮೆ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಶಿವಮೊಗ್ಗ ತೋಟಗಾರಿಕೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.


ಫಸಲು ಬಿಡುವಂತಹ ಅಡಿಕೆ, ಮಾವು, ಕಾಳುಮೆಣಸು ಮತ್ತು ನಾಟಿ ಮಾಡಿರುವಂತಹ ಶುಂಠಿ ಬೆಳೆಗಳಿಗೆ ರೈತರು ವಿಮೆ ಮಾಡಿಸಬಹುದಾಗಿದ್ದು, ಆಸಕ್ತ ರೈತರು ನಿಗದಿತ ನಮೂನೆ ಅರ್ಜಿಯನ್ನು ಹತ್ತಿರದ ರೈತ ಸಂಪರ್ಕ ಕೇಂದ್ರ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಪ್ರಸಕ್ತ ಸಾಲಿನ ಪಹಣಿ, ಬ್ಯಾಂಕ್ ಪಾಸ್‌ಬುಕ್ ಪ್ರತಿ, ಆಧಾರ್ ಕಾರ್ಡ್, ಸ್ವಯಂ ಘೋಷಿತ ಬೆಳೆ ವಿವರಗಳೊಂದಿಗೆ ತಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ, ಗ್ರಾಮ ಒನ್ ಅಥವಾ ಬ್ಯಾಂಕುಗಳಲ್ಲಿ ಜು. 31 ರೊಳಗೆ ವಿಮೆ ಕಂತನ್ನು ಪಾವತಿಸುವುದು.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರಗಳಾದ ಶಿವಮೊಗ್ಗ -08182-279415/9980009438, ಭದ್ರಾವತಿ-08282-295029/9108252536, ಶಿಕಾರಿಪುರ-08187-223544/8310662972, ಸೊರಬ-08184-295112/9663634388, ಸಾಗರ-08183-295124/9900046121, ತೀರ್ಥಹಳ್ಳಿ-08181-228151/9108280642, ಹೊಸನಗರ-08185-295364/9591395327 ಗಳ ಅಧಿಕಾರಿಗಳನ್ನು ಸಂಪರ್ಕಿಸುಬಹುದಾಗಿದೆ.

Leave a Reply

Your email address will not be published. Required fields are marked *