ಮಂಜುನಾಥ ಶೆಟ್ಟಿ…

ಶಿವಮೊಗ್ಗ ನಗರದ ಅಂಬೇಡ್ಕರ್ ಭವನದಲ್ಲಿ ವಾಲ್ಮೀಕಿ ನಾಯಕ ಯುವ ಪಡೆ ಶಿವಮೊಗ್ಗ ಘಟಕ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟನೆಯನ್ನು ಸಂಸದರಾದ ಬಿ ವೈ ರಾಘವೇಂದ್ರ ನೆರವೇರಿಸಿದರು.

ನಂತರ ಮಾತನಾಡಿ ಅವರು ಅಧ್ಯಕ್ಷರಾದ ಹರೀಶ್ ರವರ ನೇತೃತ್ವದಲ್ಲಿ ಪ್ರತಿ ವರ್ಷವೂ ಮಕ್ಕಳಿಗೆ ಸ್ಪೂರ್ತಿ ಉತ್ಸಾಹ ತುಂಬುವ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಬಹಳ ಚೆನ್ನಾಗಿ ನಡೆಸುತ್ತಿದ್ದಾರೆ ಎಂದರು.

ಜೊತೆಯಲ್ಲಿ ಶಿವಮೊಗ್ಗ ನಗರದ ಶಾಸಕರಾದ ಎಸ್ ಎನ್ ಚನ್ನಬಸಪ್ಪನವರು, ವಿಧಾನ ಪರಿಷತ್ ಸದಸ್ಯರಾದ ಡಿ ಎಸ್ ಅರುಣ್ ರವರು, ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕರಾದ ಹುದಿಗೆರೆ ರಮೇಶಣ್ಣನವರು ಜಿಲ್ಲಾಧ್ಯಕ್ಷರಾದ ಶೇಖರಪ್ಪನವರು,ಎಲ್ಲಾ ತಾಲೂಕಿನ ಅಧ್ಯಕ್ಷರು, ಸಮಾಜದ ಪ್ರಭಾವಿ ನಾಯಕರು, ಮಹಿಳೆಯರು,ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *