ಮಂಜುನಾಥ ಶೆಟ್ಟಿ…

​ಶಿವಮೊಗ್ಗ: “ಕ್ಷೇತ್ರದ ಸಾರ್ವಜನಿಕರ ದೈನಂದಿನ ಕಷ್ಟ-ಸುಖಗಳಿಗೆ ತಕ್ಷಣ ಸ್ಪಂದಿಸಿ, ನೈಸರ್ಗಿಕ ವಿಕೋಪಗಳಿಂದ ತೊಂದರೆಗೊಳಗಾದ ಕುಟುಂಬಗಳಿಗೆ ಮಾನವೀಯ ನೆಲೆಯಲ್ಲಿ ಆಸರೆಯಾಗುವುದು ನಮ್ಮ ಜವಾಬ್ದಾರಿಯಾಗಿದೆ” ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ತಿಳಿಸಿದ್ದಾರೆ.

​ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಶಿವಮೊಗ್ಗ ನಗರದ ನ್ಯೂ ಮಂಡ್ಲಿ ಬಡಾವಣೆಯಲ್ಲಿ ಮನೆ ಕುಸಿದಿರುವ ಜಾಗಕ್ಕೆ ಶಾಸಕರು ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಖುದ್ದಾಗಿ ಭೇಟಿ ನೀಡಿ ಜಂಟಿ ಪರಿಶೀಲನೆ ನಡೆಸಿದ ಬಳಿಕ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

​ಮನೆ ಹಾನಿಗೊಳಗಾಗಿ ಆಶ್ರಯ ಕಳೆದುಕೊಂಡಿರುವ ಕುಟುಂಬದ ಅಹವಾಲನ್ನು ಆಪ್ತವಾಗಿ ಆಲಿಸಿದ ಶಾಸಕರು, ಪರಿಸ್ಥಿತಿಯ ಗಾಂಭೀರ್ಯತೆಯನ್ನು ಮನಗಂಡು ಧೈರ್ಯ ತುಂಬಿದರು. ​ನಂತರ, ಸ್ಥಳದಲ್ಲಿದ್ದ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕರು, “ಮಳೆ ಹಾನಿ ಸಂತ್ರಸ್ತರಿಗೆ ಪರಿಹಾರ ವಿತರಿಸುವಲ್ಲಿ ಯಾವುದೇ ರೀತಿಯ ವಿಳಂಬ ಧೋರಣೆಯನ್ನು ಸಹಿಸುವುದಿಲ್ಲ. ತಕ್ಷಣವೇ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ, ಕುಟುಂಬಕ್ಕೆ ಗರಿಷ್ಠ ಮಟ್ಟದ ಪರಿಹಾರ ಸಿಗುವಂತೆ ಕ್ರಮ ಕೈಗೊಳ್ಳಬೇಕು” ಎಂದು ಕಟ್ಟುನಿಟ್ಟಾಗಿ ಆದೇಶಿಸಿದರು.

ಈ ಸಂದರ್ಭದಲ್ಲಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಶ್ರೀ ಜಗನ್ನಾಥ್, SC ಮೋರ್ಚಾ ನಗರ ಅಧ್ಯಕ್ಷರಾದ ಶ್ರೀ ವಿಜಯೇಂದ್ರ, ಕಾರ್ಯದರ್ಶಿಗಳಾದ ಶ್ರೀ ರಾಘವೇಂದ್ರ, ಮಹಾನಗರ ಪಾಲಿಕೆಯ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *