ಮಂಜುನಾಥ ಶೆಟ್ಟಿ…

ನಗರದ ಶಂಕರಮಠ ರಸ್ತೆಯಲ್ಲಿ ಕಳೆದ ಕೆಲವು ವರ್ಷಗಳಿಂದ ಸಂಚಾರದಟ್ಟಣೆ ಇದ್ದು, ಸ್ಥಳೀಯ ವರ್ತಕರು ರಸ್ತೆಯ ಇಕ್ಕೆಲಗಳಲ್ಲಿ ಫುಟ್‌ಪಾತ್ ಅತಿಕ್ರಮಣ ಮಾಡಿ ಅಡ್ಡಿ ಉಂಟು ಮಾಡಿದ ಹಿನ್ನೆಲೆಯಲ್ಲಿ ಸಂಚಾರಿ ಪೊಲೀಸರು ಟ್ರಾಫಿಕ್ ಇನ್ಸ್‌ಪೆಕ್ಟರ್ ದೇವರಾಜ್ ಅವರು ನೇತೃತ್ವದಲ್ಲಿ ಫುಟ್‌ಪಾತ್ ತೆರವು ಕಾರ್ಯಾಚರಣೆ ನಡೆಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಶಂಕರಮಠ ರಸ್ತೆಯ ಎರಡೂ  ನಿಲ್ಲಿಸಬಾರದು ಎಂದು ಎಚ್ಚರಿಕೆ ನೀಡಿದ್ದಾರೆ. ಸಂಚಾರ ಪೂರ್ವ ಮತ್ತು ಪಶ್ಚಿಮ ಠಾಣೆಯ ಪೊಲೀಸರು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.


ಹೊಸ ಕಟ್ಟಡಗಳು ಕೂಡ ನಿರ್ಮಾಣ ಮಾಡಿದ್ದು, ಕಟ್ಟಡದ ಮಾಲೀಕರು ಬಹುಮಹಡಿ ಕಟ್ಟಡ ಕಟ್ಟಿದ್ದರೂ ಕೂಡ ನಿಯಮಗಳನ್ನು ಉಲ್ಲಂಘಿಸಿ ಅತಿಕ್ರಮಣ ಮಾಡಿದ್ದು, ಇಂದು ಸಂಚಾರಿ ಪೊಲೀಸರು ಅವರಿಗೆ ತಿಳಿವಳಿಕೆ ನೀಡಿ ತೆರವು ಕಾರ್ಯಾಚರಣೆ ಮಾಡಿದ್ದಾರೆ. ಹಾಗೂ ಸಾರ್ವಜನಿಕರಿಗೂ ವಿನಂತಿ ಮಾಡಿದ್ದು, ಸಂಚಾರ ನಿಯಮಗಳನ್ನು ಪಾಲಿಸಬೇಕು. ಫುಟ್‌ಪಾತ್ ನಲ್ಲಿ ಯಾವುದೇ ವಾಹನಗಳನ್ನು ನಿಲ್ಲಿಸಬಾರದು ಎಂದು ಎಚ್ಚರಿಕೆ ನೀಡಿದ್ದಾರೆ. ಸಂಚಾರ ಪೂರ್ವ ಮತ್ತು ಪಶ್ಚಿಮ ಠಾಣೆಯ ಪೊಲೀಸರು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.,

Leave a Reply

Your email address will not be published. Required fields are marked *