ಮಂಜುನಾಥ ಶೆಟ್ಟಿ…

ಶಿವಮೊಗ್ಗ ಗ್ರಾಮಾಂತರ ಭಾಗದ ಅಗಸಾವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಪುಸ್ತಕ ಮತ್ತು ಬಟ್ಟೆ ವಿತರಣೆ ಮಾಡಲಾಯಿತು.
ಜಿಲ್ಲಾ ಬಿಜೆಪಿ ಮುಖಂಡರಾದ ಶಂಕರ್ ಗೌಡ ರವರು ಸರ್ಕಾರಿ ಶಾಲಾ ಮಕ್ಕಳಿಗೆ ಪುಸ್ತಕ ಮತ್ತು ಬಟ್ಟೆ ವಿತರಣೆ ಮಾಡಿ ಮಾನವೀಯತೆ ಮರೆದಿದ್ದಾರೆ.
ಮತ್ತೊಂದಡೆ ಕಲ್ಲೂರು ಮತ್ತು ಗೋವಿಂದಪುರ ಗ್ರಾಮದಲ್ಲಿ ಕ್ರಿಕೆಟ್ ಆಡುವ ಕ್ರೀಡಾ ಪ್ರತಿಭೆಗಳಿಗೆ ಉತ್ಸಾಹ ನೀಡಿ ಬೆಂಬಲಿಸಲಾಯಿತು.
ಇದರ ಜೊತೆಗೆ ದುರ್ಗಿಗುಡಿಯ ಪ್ರತಿಷ್ಠಿತ ತೃಪ್ತಿ ಹೆಲ್ತ್ ಕೇರ್ ವತಿಯಿಂದ ಗೋವಿಂದಪುರದಲ್ಲಿ ಶಂಕರ ರವರ ನೇತೃತ್ವದಲ್ಲಿ ಗ್ರಾಮದ ಗ್ರಾಮಸ್ಥರಿಗೆ ಮತ್ತು ಸಾರ್ವಜನಿಕರಿಗೆ ಉಚಿತ ಆರೋಗ್ಯ ಶಿಬಿರವನ್ನು ಮಾಡಿ ಯಶಸ್ವಿಗೊಳಿಸಿದರು.
ಶಂಕರ್ ಮತ್ತು ತಂಡದವರು ಮುಂಚೆಯಿಂದಲೂ ಸಹ ಸಮಾಜ ಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡು ಉತ್ತಮ ಕೆಲಸ ಕಾರ್ಯಗಳನ್ನು ಮಾಡಿದ್ದಾರೆ.
ಇವರ ಈ ಸಮಾಜಮುಖಿ ಕಾರ್ಯವನ್ನು ನೋಡಿ ಶಾಲೆಯ ಪ್ರಾಂಶುಪಾಲರು ಮತ್ತು ಸಿಬ್ಬಂದಿ ವರ್ಗ ಕೆಲಸವನ್ನು ಶ್ಲಾಘಿಸಿದ್ದಾರೆ. ಮುಂದೆಯೂ ಸಹ ನಿಮ್ಮಿಂದ ಇಂತಹ ಸಮಾಜಮುಖಿ ಮತ್ತು ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಕೆಲಸಗಳು ನಿರಂತರವಾಗಿ ಆಗಲಿ ಎಂದು ಆಶಿಸಿದರು.
ಈ ಸಂದರ್ಭದಲ್ಲಿ ತಂಡದ ಸದಸ್ಯರು ಮತ್ತು ಶಾಲೆಯ ಸಿಬ್ಬಂದಿ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.