ಮಂಜುನಾಥ ಶೆಟ್ಟಿ…

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಹೇಮಂತ್ ಎನ್ ಜುಲೈ 14ರಂದು ಸಾಗರ ತಾಲ್ಲೂಕಿನ ಕೋಳೂರು ಗ್ರಾಮ ಪಂಚಾಯತಿಗೆ ಭೇಟಿ ನೀಡಿ, ವಿವಿಧ ಪ್ರಗತಿ ಪರಿಶೀಲನೆ ಹಾಗೂ ಮತದಾರರ ಜಾಗೃತಿ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು.


ಕೋಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಎಸ್ ಐ ಆರ್ ಪ್ರಗತಿ ಪರಿಶೀಲನೆ‌ ಕುರಿತು ಸಮಗ್ರ ಪರಿಶೀಲನೆ ನಡೆಸಿದ ಸಿಇಒ ಅವರು, ನಂತರ ಬಿ.ಎಲ್.ಒ ಗಳೊಂದಿಗೆ ಮಹತ್ವದ ಚರ್ಚೆ ನಡೆಸಿದರು. ಇದೇ ಸಂದರ್ಭದಲ್ಲಿ ಸಾರ್ವಜನಿಕ ಮತದಾರರನ್ನು ಭೇಟಿಯಾಗಿ, ಅವರಿಗೆ ಎಸ್ ಐ ಆರ್ ಹಾಗೂ ಮತದಾನದ ಪ್ರಕ್ರಿಯೆಗಳ ಕುರಿತು ಸವಿಸ್ತಾರವಾದ ಮಾಹಿತಿ ಮತ್ತು ಜಾಗೃತಿ ಮೂಡಿಸಿದರು.


ಹಸಿರುಮಕ್ಕಿ ಲಾಂಚ್‌ನಲ್ಲಿ ‘ಸ್ವೀಪ್’ ಸಂಭ್ರಮ
ಇದಾದ ಬಳಿಕ, ತಾಲ್ಲೂಕಿನ ಪ್ರಸಿದ್ಧ ಹಸಿರುಮಕ್ಕಿ ಲಾಂಚ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ವೀಪ್ (SVEEP – ಮತದಾರರ ಶಿಕ್ಷಣ ಮತ್ತು ಚುನಾವಣಾ ಸಹಭಾಗಿತ್ವ) ಜಾಗೃತಿ ಕಾರ್ಯಕ್ರಮದಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಭಾಗವಹಿಸಿ, ಮತದಾನದ ಮಹತ್ವದ ಕುರಿತು ನೆರೆದಿದ್ದ ಸಾರ್ವಜನಿಕರಿಗೆ ಕರೆ ನೀಡಿದರು.


ಈ ಸಂದರ್ಭದಲ್ಲಿ ಸಾಗರ ತಾಲ್ಲೂಕು ಪಂಚಾಯತಿಯ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು , ಸಹಾಯಕ ನಿರ್ದೇಶಕರು (ಪಂಚಾಯತ್ ರಾಜ್ ಮತ್ತು ಗ್ರಾಮೀಣ ಉದ್ಯೋಗ), ಕೋಳೂರು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳು ಹಾಗೂ ಪಂಚಾಯಿತಿಯ ಸಿಬ್ಬಂದಿ ವರ್ಗದವರು ಹಾಜರಿದ್ದರು.

Leave a Reply

Your email address will not be published. Required fields are marked *