ಮಂಜುನಾಥ ಶೆಟ್ಟಿ…

2026 ನೇ ಸಾಲಿನಲ್ಲಿ ಶಾಲಾ ಶಿಕ್ಷಣ ಇಲಾಖೆಯಿಂದ ರಾಜ್ಯ ಮಟ್ಟದ ಉತ್ತಮ ಶಿಕ್ಷಕ
ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಶಾಲಾ ಶಿಕ್ಷಣ ವ್ಯಾಪ್ತಿಯ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಯಂ ಆಗಿ ನೇಮಕವಾಗಿ, ಅನುದಾನಿತ ಪ್ರಾಥಮಿಕ ಅಥವಾ ಪ್ರೌಢಶಾಲೆಗಳಲ್ಲಿ ಅನುದಾನ ಸಹಿತವಾಗಿ ಅನುಮೋದನೆಗೊಂಡು ಕನಿಷ್ಠ 10 ವರ್ಷಗಳ ತೃಪ್ತಿದಾಯಕ ಸೇವೆಯನ್ನು ಸಲ್ಲಿಸಿರುವ ಶಿಕ್ಷಕರು, ದೈಹಿಕ ಶಿಕ್ಷಕರು, ವಿಶೇಷ ಶಿಕ್ಷಕರು ಹಾಗೂ ಮುಖ್ಯ ಶಿಕ್ಷಕರುಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು,
ಆಸಕ್ತರು ಶಾಲಾ ಶಿಕ್ಷಣ ಇಲಾಖೆಯ ಅಂತರ್ಜಾಲ ತಾಣ https://schooleducation.karnataka.gov.in ಮೂಲಕ ಜು. 31 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಸಂಪರ್ಕಿಸಬಹುದೆಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ) ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Leave a Reply

Your email address will not be published. Required fields are marked *