ಮಂಜುನಾಥ ಶೆಟ್ಟಿ…

ಶಿವಮೊಗ್ಗ ಜಿಲ್ಲೆಯಲ್ಲಿ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣಕ್ಕಾಗಿ ಕಾರ್ಯಾಚರಿಸುತ್ತಿರುವ ಎಲ್ಲಾ ಸ್ವಯಂಸೇವಾ ಸಂಸ್ಥೆಗಳು ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು ಹಾಗೂ ಅವಧಿ ಮುಗಿದಿರುವ ಸಂಸ್ಥೆಗಳು ನವೀಕರಣಕ್ಕೆ ಅರ್ಜಿ ಸಲ್ಲಿಸಬೇಕು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.


ಅಂಗವಿಕಲರ ಅಧಿನಿಯಮ ೨೦೧೬ರ ಸೆಕ್ಷನ್ ೫೧, ೫೨ರಡಿ ಮತ್ತು ಪೋಷಕರ ಪೋಷಣೆ, ಸಂರಕ್ಷಣೆ ಹಾಗೂ ಹಿರಿಯ ನಾಗರಿಕರ ರಕ್ಷಣಾ ಕಾಯ್ದೆ ೨೦೦೭ರ ಅಡಿಯಲ್ಲಿ ಸಂಸ್ಥೆಗಳು ನೋಂದಣಿಯಾಗುವುದು ಕಡ್ಡಾಯವಾಗಿದೆ.
ಅರ್ಹ ಸ್ವಯಂಸೇವಾ ಸಂಸ್ಥೆಗಳು ಸೇವಾಸಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ, ನೋಂದಣಿ ಪ್ರತಿಯನ್ನು ಸಲ್ಲಿಸಬೇಕು.
ಈಗಾಗಲೇ ನೋಂದಣಿಯಾಗಿದ್ದು ಅವಧಿ ಮುಕ್ತಾಯವಾಗಿದ್ದರೆ, ನವೀಕರಣಕ್ಕಾಗಿ ಅರ್ಜಿ ಸಲ್ಲಿಸಿ ಅದರ ಪ್ರತಿಯೊಂದಿಗೆ ಕಛೇರಿಗೆ ಮಾಹಿತಿ ನೀಡತಕ್ಕದ್ದು.


ಹೆಚ್ಚಿನ ಮಾಹಿತಿಗಾಗಿ 08182-251676 / 9538905242, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಛೇರಿ, ಶಿವಮೊಗ್ಗ ಇವರನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *