ಮಂಜುನಾಥ ಶೆಟ್ಟಿ…
ಕರ್ನಾಟಕ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್. ಷಡಾಕ್ಷರಿಯವರ ಹುಟ್ಟು ಹಬ್ಬದ ಪ್ರಯುಕ್ತ ವಿಶೇಷ ಹುಟ್ಟುಹಬ್ಬವನ್ನು ಆಚರಿಸಲಾಯಿತು.
ಶಿವಕುಮಾರ ಸ್ವಾಮೀಜಿಗಳ ನೌಕರರ ಸಂಘದ ಎಲ್ಲಾ ಪದಾಧಿಕಾರಿಗಳು ಗುಡ್ ಲಕ್ ಸರ್ಕಲ್‌ನಲ್ಲಿರುವ ಶ್ರೀ ವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ರುದ್ರಾಭಿಷೇಕ ಪೂಜೆ ಸಲ್ಲಿಸಿ, ಅವರ ಉತ್ತಮ ಆರೋಗ್ಯ, ದೀರ್ಘಾಯುಷ್ಯ, ಯಶಸ್ಸು ಹಾಗೂ ಜನಸೇವೆಯ ಪಯಣ ಮತ್ತಷ್ಟು ಉಜ್ವಲವಾಗಲಿ ಎಂದು ಪ್ರಾರ್ಥಿಸಿದರು.
ಮಾತೊಂದಡೆ ಶಿವಕುಮಾರ ಸ್ವಾಮೀಜಿಗಳ ನೌಕರರ ಸಂಘ, ಶಿವಮೊಗ್ಗ ವತಿಯಿಂದ ಶಿವಮೊಗ್ಗದ ಶ್ರೀ ಬಿ.ಎಸ್. ಯಡಿಯೂರಪ್ಪ ವಿದ್ಯಾರ್ಥಿ ನಿಲಯ, ಶಿವಮೊಗ್ಗದ ಮುಂಭಾಗದಲ್ಲಿ ಪರಿಸರ ಸಂರಕ್ಷಣೆಯ ಸಂದೇಶ ಸಾರುವ ಗಿಡ ನೆಡುವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಶಿವಕುಮಾರ ಸ್ವಾಮೀಜಿಗಳ ನೌಕರರ ಸಂಘದ ಪದಾಧಿಕಾರಿಗಳು ಸದಸ್ಯರು ಭಕ್ತಾದಿಗಳು ಗಣ್ಯರು ಮತ್ತು ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳು, ಪ್ರೌಢಶಾಲಾ ಶಿಕ್ಷಣ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಬಿ. ಸಿದ್ದಬಸಪ್ಪ, ಶ್ರೀ ನಿರಂಜನ್ ಮೂರ್ತಿ, ಶ್ರೀ ಬಸವನಗೌಡ, ಶ್ರೀ ಟಿ.ಎಂ. ಕುಮಾರ್, ಶ್ರೀ ಟಿ.ಜಿ. ಅಶೋಕ್, ಶ್ರೀ ಎನ್.ಎಂ. ರಂಗನಾಥ ಹಾಗೂ ಶಿವಕುಮಾರ ಸ್ವಾಮೀಜಿಗಳ ನೌಕರರ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.