ಮಂಜುನಾಥ ಶೆಟ್ಟಿ…
ಬಿಜೆಪಿ ಯುವ ಮೋರ್ಚಾ ಶಿವಮೊಗ್ಗ ಜಿಲ್ಲಾಧ್ಯಕ್ಷ ಪ್ರಶಾಂತ್ ಕುಕ್ಕೆ ರವರ ನೇತೃತ್ವದಲ್ಲಿ ಕುವೆಂಪು ವಿಶ್ವವಿದ್ಯಾಲಯದ ಕುಲಪತಿಗಳ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿ ನಂತರ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಕುವೆಂಪು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ ವಿರೋಧಿ ನೀತಿಗಳು, ಆಡಳಿತ ವೈಫಲ್ಯ, ಭ್ರಷ್ಟಾಚಾರ ಹಾಗೂ ಅವಸ್ಥೆಗಳಿಂದ ತುಂಬಿದೆ. ಮುಂಬರುವ ದಿನಗಳಲ್ಲಿ ಸರಿಪಡಿಸಿದೆ ಇದ್ದಲ್ಲಿ ಉಗ್ರ ಹೋರಾಟ ನಡೆಸುವುದು ಎಂದು ಎಚ್ಚರಿಕೆ ನೀಡಿದರು.
ಪ್ರಮುಖ ಆಗ್ರಹಗಳು…
- ವಿದ್ಯಾರ್ಥಿಗಳ ಶುಲ್ಕ ಹೆಚ್ಚಳವನ್ನು ಕೂಡಲೇ ಹಿಂಪಡೆಯಬೇಕು.
- Marks Cardವಿತರಣೆಯಲ್ಲಿನ ವಿಳಂಬವನ್ನು ತಕ್ಷಣ ಸರಿಪಡಿಸಬೇಕು.
- Convocation(ಪದವಿ ಪ್ರದಾನ) ಶುಲ್ಕವನ್ನು ಕಡಿಮೆ ಮಾಡಬೇಕು.
- LMS ಸೇರಿದಂತೆ ವಿವಿಧ ಹೆಸರಿನಲ್ಲಿ ವಿದ್ಯಾರ್ಥಿಗಳಿಂದ ಹೆಚ್ಚುವರಿ ಶುಲ್ಕ ವಸೂಲಿ ಮಾಡುವುದನ್ನು ರದ್ದುಪಡಿಸಬೇಕು.
- ಹಾಸ್ಟೆಲ್, ಗ್ರಂಥಾಲಯ ಹಾಗೂ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಬೇಕು.
- ಗುತ್ತಿಗೆ ನೌಕರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು.
- ನೇಮಕಾತಿ, ಟೆಂಡರ್, ಖರೀದಿ ಹಾಗೂ ಆಡಳಿತದಲ್ಲಿ ನಡೆದಿರುವ ಭ್ರಷ್ಟಾಚಾರದ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.
- ವಿದ್ಯಾರ್ಥಿಗಳ ಹಿತಾಸಕ್ತಿಗೆ ವಿರುದ್ಧವಾಗಿರುವ ಎಲ್ಲಾ ನಿರ್ಧಾರಗಳನ್ನು ಹಿಂಪಡೆಯಬೇಕು.
- ಆಡಳಿತ ವೈಫಲ್ಯಕ್ಕೆ ಹೊಣೆ ಹೊತ್ತು ಕುಲಪತಿಗಳು ರಾಜೀನಾಮೆ ನೀಡಬೇಕು.
ಈ ಪ್ರತಿಭಟನೆಯ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರಶಾಂತ್ ಕುಕ್ಕೆ ಉಪಾಧ್ಯಕ್ಷರು ಪ್ರಧಾನ ಕಾರ್ಯದರ್ಶಿ ಮುಖಂಡರು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.