ಮಂಜುನಾಥ ಶೆಟ್ಟಿ…
ಶಿವಮೊಗ್ಗ ನಗರ ಶಾಸಕರಾದ ಚನ್ನಬಸಪ್ಪ ರವರ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದರು.
ನಗರದ ಪಂಚಮುಖಿ ಆಂಜನೇಯ ದೇವಾಲಯದಲ್ಲಿ ದುರ್ಗಿಗುಡಿ ಬಿಜೆಪಿ ವಾರ್ಡ್ ಅಧ್ಯಕ್ಷರಾದ ಶಿವಾನಂದ್ ಅವರ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಶಾಸಕ ಚನ್ನಬಸಪ್ಪನವರು ಮೊದಲ ಬಾರಿಗೆ ಶಾಸಕರಾದರು ನಗರದ ಸಮಗ್ರ ಅಭಿವೃದ್ಧಿಗೆ ಶ್ರಮ ವಹಿಸಿದ್ದಾರೆ.ಮುಂದೆಯೂ ಸಹ ಇದೇ ರೀತಿಯಲ್ಲಿ ನಗರದ ಅಭಿವೃದ್ಧಿಗೆ ಆಗಲಿ ಎಂದು ಆಶಿಸಿದರು.
ಈ ಸಂದರ್ಭದಲ್ಲಿ ಬಿಜೆಪಿಯ ಮುಖಂಡರು ಪ್ರಮುಖರು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.