ಮಂಜುನಾಥ ಶೆಟ್ಟಿ…

ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ಅಶೋಕ್ ವೃತ್ತದಲ್ಲಿ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಸಿಡಬ್ಲ್ಯೂಆರ್ ಸಿ ಆದೇಶದ ಪ್ರಕಾರ ತಮಿಳುನಾಡಿಗೆ ನಾಲ್ಕು ಟಿಎಂಸಿ ನೀರು ಹರಿಯ ಬಿಡಬೇಕೆಂಬ ಆದೇಶವು ಸಂಪೂರ್ಣ ರೈತ ವಿರೋಧಿ ಆದೇಶವಾಗಿದ್ದು ಈಗಾಗಲೇ ಡ್ಯಾಮಿನಲ್ಲಿ ನೀರು ಇಲ್ಲದೆ ಇರುವುದರಿಂದ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರನ್ನು ಹರಿಸಕೂಡದು ಎಂದು ಹಾಗೂ ಸಂಪೂರ್ಣದ ಬರದ ಛಾಯೆ ಆವರಿಸಿದೆ.

ಈಗ ಯಾವುದೇ ಚಾನಲ್ಗಳಿಗೆ ನೀರು ಹರಿಸದೆ ಇರುವುದರಿಂದ ಸುಮಾರು 168 ಹಳ್ಳಿಗಳು ಸಂಕಷ್ಟಕ್ಕೆ ಸಿಲುಕಿದೆ ಕೆಲವು ವಲಯ ಸಂಪೂರ್ಣವಾಗಿ ಬರದಿಂದ ತತ್ತರಿಸಿದ್ದು ಈ ಕೂಡಲೇ ತಮಿಳುನಾಡಿಗೆ ಹರಿಯುವ ನೀರನ್ನು ಸಂಪೂರ್ಣವಾಗಿ ತಡೆಹಿಡಿದು ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದೆಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ರಾಜ್ಯ ಸರ್ಕಾರಕ್ಕೆ ಆಗ್ರಹಿಸುತ್ತೇವೆ ಎಂದರು.

ನೀರು ಹರಿಸಿದರೆ ತಮಿಳುನಾಡಿಗೆ ಮುಂದಿನ ದಿನಗಳಲ್ಲಿ ಕರವೇ ಸ್ವಾಭಿಮಾನಿ ಬಣದಿಂದ ಉಗ್ರ ಹೋರಾಟದ ಎಚ್ಚರಿಕೆಯನ್ನು ನೀಡುತ್ತದೆ ಎಂದರು.

ಈ ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ಹೆಚ್ ಎಸ್ ಜಿಲ್ಲಾ ಸಂಚಾಲಕ ಶಿವಕುಮಾರ್ ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಮಹಮ್ಮದ್ ಶಫಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗರಾಜ್ ಜಿಲ್ಲಾ ಕಾರ್ಯದರ್ಶಿ ಸಾಧಿಕ್ ಏ ಜಿಲ್ಲಾ ಸಂಘಟನಾ ಸಹ ಕಾರ್ಯದರ್ಶಿ ನೂರುಲ್ಲ ಕಾನ್ ಯುವ ಅಧ್ಯಕ್ಷ ಸಂತೋಷ್ ಪರಮೇಶ್ ಸತೀಶ್ 26ನೇ ವಾರ್ಡ್ ಅಧ್ಯಕ್ಷ ವಿಕಾಸ್ ಮುಂತಾದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರೂ ಹಾಜರಿದ್ದರು.

Leave a Reply

Your email address will not be published. Required fields are marked *