ಮಂಜುನಾಥ ಶೆಟ್ಟಿ…
ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರದ ಪ್ರವೀಣ್ ಶೆಟ್ಟಿ ನೇತೃತ್ವದಲ್ಲಿ ಮೈಸೂರು ಬ್ಯಾಂಕ್ ವೃತ್ತದಲ್ಲಿ,ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಸಭೆಯಲ್ಲಿ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶದ ವಿರುದ್ಧ , ಕರವೇ ಪ್ರವೀಣ್ ಶೆಟ್ಟಿ ಬಣದಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಈ ವೇಳೆಗಾಗಲೇ ಶೇಕಡಾ 70 ರಷ್ಟು ಮಳೆಯಾಗಬೇಕಿತ್ತು, ಬದಲಾಗಿ ಕೇವಲ ಶೇಕಡಾ 20 ರಷ್ಟು ಮಾತ್ರ ಮಳೆಯಾಗಿದೆ,ತೀವ್ರ ಮುಂಗಾರು ಮಳೆಯ ಕೊರತೆ ಇರುವುದರಿಂದ ತಮಿಳುನಾಡಿಗೆ ನೀರು ಬಿಡಲು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ ಎಂದರು.ಒಂದು ವೇಳೆ ರಾಜ್ಯ ಸರ್ಕಾರ ನೀರು ಹರಿಸಲು ಮುಂದಾದರೆ ಕರ್ನಾಟಕ ಬಂದ್ ಮಾಡುವ ಎಚ್ಚರಿಕೆಯನ್ನು ನೀಡಿದ್ದಾರೆ.ಇದೇ ಸಂದರ್ಭದಲ್ಲಿ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರು ಪ್ರಧಾನ ಕಾರ್ಯದರ್ಶಿ ಜಿಲ್ಲೆಯ ಪ್ರಮುಖ ಅಧ್ಯಕ್ಷರು ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.