ಮಂಜುನಾಥ ಶೆಟ್ಟಿ…

ದಿನ ದಿನ ಬೆಳೆಯುತ್ತಿದ್ದಂತೆ ಶಿವಮೊಗ್ಗ ನಗರದಲ್ಲಿ ಟ್ರಾಫಿಕ್ ಕೂಡ ಹೆಚ್ಚಾಗಿದೆ.ಸಂಚಾರಿ ಸಿಪಿಐ ದೇವರಾಜ್ ರವರು ಅಧಿಕಾರ ವಹಿಸಿಕೊಂಡು ನಂತರ ನಗರದಲ್ಲಿ ಟ್ರಾಫಿಕ್ ಸಮಸ್ಯೆಗೆ ಸಾಕಷ್ಟು ಬದಲಾವಣೆ ತಂದಿದ್ದಾರೆ.ಜೊತೆಗೆ ನಗರದ ಪ್ರಮುಖ ಫುಟ್ ಪಾತ್ ಗಳಲ್ಲಿ ಒತ್ತುವರಿ ಮಾಡಿಕೊಂಡಿರುವ ವ್ಯಾಪಾರಸ್ಥರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒತ್ತುವರಿ ತೆರವು ಮಾಡಿಸುವ ಮೂಲಕ ಪಾದಚಾರಿಗಳಿಗೆ ಅನುಕೂಲ ಮಾಡಿಕೊಟ್ಟು ಜೊತೆಗೆ ಉತ್ತಮ ಕಾರ್ಯ ನಿರ್ವಹಿಸಿ ಸಾರ್ವಜನಿಕರಿಂದ ಉತ್ತಮ ಪ್ರಶಂಸೆ ಪಡೆದಿದ್ದಾರೆ.

ಶಿವಮೊಗ್ಗ ನಗರದ ಖಾಸಗಿ ಬಸ್ ನಿಲ್ದಾಣದ ಸಮೀಪ ತಾತ್ಕಾಲಿಕವಾಗಿ ಕಾರ್ಯನಿರ್ವಹಿಸುತ್ತಿದ್ದ ಹೂವಿನ ಮಾರುಕಟ್ಟೆಯನ್ನು, ಕಳೆದ 15 ದಿನಗಳಿಂದ ವಿಶೇಷ ಕಾರ್ಯಾಚರಣೆ ನಡೆಸಿ ಹಾಗೂ ಹೂವಿನ ವ್ಯಾಪಾರಸ್ಥರಿಗೆ ಒಂದು ವಾರದ ಕಾಲಾವಕಾಶ ನೀಡಿದ್ದರು.

ವಾರದೊಳಗೆ ಶಿವಪ್ಪನಾಯಕ ಸರ್ಕಲ್ ಸಮೀಪದ ಬಹುಮಹಡಿ ಕಟ್ಟಡಕ್ಕೆ ಸಂಪೂರ್ಣವಾಗಿ ಸ್ಥಳಾಂತರಿಸಲಾಗಿದೆ.
ಈ ಹಿನ್ನೆಲೆಯಲ್ಲಿ, ಖಾಲಿಯಾಗಿರುವ ಸದರಿ ಸ್ಥಳದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ದ್ವಿಚಕ್ರ ವಾಹನಗಳ ಪಾರ್ಕಿಂಗ್ ವ್ಯವಸ್ಥೆಯನ್ನು ಇಂದಿನಿಂದ ಅವಕಾಶ ಕಲ್ಪಿಸಲಾಗಿದೆ.

ಸಾರ್ವಜನಿಕರು ಈ ಪಾರ್ಕಿಂಗ್ ವ್ಯವಸ್ಥೆಯನ್ನು ಸದುಪಯೋಗಪಡಿಸಿಕೊಂಡು, ಸಂಚಾರ ವ್ಯವಸ್ಥೆ ಸುಗಮವಾಗಲು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಸಂಚರಿ ಸಿಪಿಐ ದೇವರಾಜ್ ರವರು ವಿನಂತಿಸಿದ್ದಾರೆ.

Leave a Reply

Your email address will not be published. Required fields are marked *