ಮಂಜುನಾಥ ಶೆಟ್ಟಿ…
ಕರ್ನಾಟಕ ನಾಗರೀಕ ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಯ ಲಿಖಿತ ಪರೀಕ್ಷೆಯನ್ನು ಜಿಲ್ಲೆಯ ವಿವಿಧ ಶಾಲಾ ಕಾಲೇಜುಗಳು ಸೇರಿ ಒಟ್ಟು 28 ಪರೀಕ್ಷಾ ಕೇಂದ್ರಗಳಲ್ಲಿ ಆಯೋಜಿಸಲಾಗಿತ್ತು.ಲಿಖಿತ ಪರೀಕ್ಷೆಯ ಸಂಬಂಧ ಶಿವಮೊಗ್ಗ ಜಿಲ್ಲೆಗೆ ನಿಗದಿಪಡಿಸಲ್ಪಟ್ಟಿದ್ದ ಒಟ್ಟು 10,737 ಪ್ರಶಿಕ್ಷಣಾರ್ಥಿಗಳಲ್ಲಿ, 10,167 ಪ್ರಶಿಕ್ಷಣಾರ್ಥಿಗಳು ಸದರಿ ಲಿಖಿತ ಪರೀಕ್ಷೆಗೆ ಹಾಜರಾಗಿದ್ದರು.
ಪರೀಕ್ಷೆಯನ್ನು ಯಶಸ್ವಿಯಾಗಿ ಯಾವುದೇ ಅಡೆತಡೆ ಇಲ್ಲದೆ ನಡೆಸಿಕೊಡುವ ಸಂಬಂಧ, ಜಿಲ್ಲಾಧಿಕಾರಿಗಳು ಶಿವಮೊಗ್ಗ ಜಿಲ್ಲೆ ಹಾಗೂ ಉಪ ನಿರ್ದೇಶಕರು, ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆಯ ಸಹಯೋಗ ಮತ್ತು ಸಹಕಾರದೊಂದಿಗೆ ಶಿವಮೊಗ್ಗ ಪೊಲೀಸ್ ಇಲಾಖೆಯು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿರುತ್ತದೆ.
28 ಪರೀಕ್ಷಾ ಕೇಂದ್ರಗಳಲ್ಲಿ ಸುರಕ್ಷತೆಯ ಸಂಬಂಧ, 6-DySP, 28-PI, 56-PSI ಸೇರಿ ಒಟ್ಟು 90 ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಇದರೊಂದಿಗೆ Frisking ಗೆ 139 ಪೊಲೀಸ್ ಅಧಿಕಾರಿ ಸಿಬ್ಬಂದಿಗಳು, ಪರೀಕ್ಷಾ ಕೇಂದ್ರಗಳ ಸುತ್ತಲಿನ ಭದ್ರತೆಗೆ 150 ಜನ ಪೊಲೀಸ್ ಅಧಿಕಾರಿ ಸಿಬ್ಬಂದಿಗಳನ್ನು ನೇಮಿಸಲಾಗಿದ್ದು ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಗಡಿಯಾರ, ಜಾಮರ್, ಗಾಳಿ ಬೆಳಕಿನ ವ್ಯವಸ್ಥೆ, ಕುಡಿಯುವ ನೀರು, ಪೀಠೋಪ ಕರಣಗಳ ಜೊತೆಗೆ ಅಗತ್ಯ ಮೂಲಭೂತ ಸೌಕರ್ಯಗಳ ಸಂಬಂಧ ಎಲ್ಲಾ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿತ್ತು, ಪಾರದರ್ಶಕ ಪರೀಕ್ಷೆಯನ್ನು ಖಚಿತಪಡಿಸಿಕೊಳ್ಳುವ ಸಂಬಂಧ, ಎಲ್ಲಾ ಪರೀಕ್ಷಾ ಕೊಠಡಿಗಳಿಗೆ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾ ಗಳನ್ನು ಸಹ ಅಳವಡಿಸಲಾಗಿರುತ್ತದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟಾರೆಯಾಗಿ ಲಿಖಿತ ಪರೀಕ್ಷೆಯು ಯಶಸ್ವಿಯಾಗಿ ಮುಕ್ತಾಯವಾಗಿದ್ದು, ಪರೀಕ್ಷೆಯ ಯಶಸ್ಸಿಗೆ ಸಹಕರಿಸಿದಂತಹ ಎಲ್ಲರಿಗೂ ಸಹ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಧನ್ಯವಾದಗಳು ಹಾಗೂ ಎಲ್ಲಾ ಪ್ರಶಿಕ್ಷಣಾರ್ಥಿಗಳಿಗೆ ಶುಭಾಶಯಗಳನ್ನು ತಿಳಿಸಿದರು.