ಮಂಜುನಾಥ ಶೆಟ್ಟಿ…
ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಡದ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಸಭೆಯಲ್ಲಿ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶದ ವಿರುದ್ಧ , ಕರವೇ ಪ್ರವೀಣ್ ಶೆಟ್ಟಿ ಬಣದಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷ ರಾಜ್ಯದಲ್ಲಿ ಈ ವೇಳೆಗಾಗಲೇ ಸಾಕಷ್ಟು ಮಳೆಯಾಗಬೇಕಿತ್ತು, ಬದಲಾಗಿ ತುಂಬಾ ವಾಡಿಕೆ ಕಿಂತ ಕಡಿಮೆಯಾಗಿ ಮಳೆಯಾಗಿದೆ,ತೀವ್ರ ಮುಂಗಾರು ಮಳೆಯ ಕೊರತೆ ಇರುವುದರಿಂದ ತಮಿಳುನಾಡಿಗೆ ನೀರು ಬಿಡಲು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ ಎಂದರು.ಒಂದು ವೇಳೆ ರಾಜ್ಯ ಸರ್ಕಾರ ನೀರು ಹರಿಸಲು ಮುಂದಾದರೆ 13ಕೆ ಕರ್ನಾಟಕ ಬಂದ್ ಮಾಡುವ ಎಚ್ಚರಿಕೆಯನ್ನು ನೀಡಿದ್ದಾರೆ.
ಈ ಸಂದರ್ಭದಲ್ಲಿ ಉಪಾಧ್ಯಕ್ಷರು ಪ್ರಧಾನ ಕಾರ್ಯದರ್ಶಿ ಜಿಲ್ಲೆಯ ಪ್ರಮುಖ ಪದಾಧಿಕಾರಿಗಳು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.