ಮಂಜುನಾಥ ಶೆಟ್ಟಿ…

ಮಾನ್ಯ ನೂತನ ಸಚಿವರಾದ ಶ್ರೀ ಎಸ್ ಮಧು ಬಂಗಾರಪ್ಪನವರು ರಾಜ್ಯದ ಮಾನ್ಯ ಮುಖ್ಯಮಂತ್ರಿಗಳು, ಹಾಗೂ ನೆಚ್ಚಿನ ನಾಯಕರಾದ ಶ್ರೀ ಡಿ.ಕೆ. ಶಿವಕುಮಾರ್‌ ಅವರನ್ನು ಇಂದು ಅವರ ಸ್ವಗೃಹದಲ್ಲಿ ಭೇಟಿಯಾಗಿ ತಮ್ಮ ನೇತೃತ್ವದ ಸಚಿವ ಸಂಪುಟದಲ್ಲಿ ಕಾರ್ಯನಿವರ್ಹಿಸಲು ಅವಕಾಶ ನೀಡಿದ್ದಕ್ಕಾಗಿ ವೈಯುಕ್ತಿಕವಾಗಿ ಹೃದಯಪೂರ್ವಕ ಕೃತಜ್ಞತೆ ಸಲ್ಲಿಸಿದರು.

ಅವರು ನನ್ನ ಮೇಲೆ ಇಟ್ಟಿರುವ ಪ್ರೀತಿ-ವಿಶ್ವಾಸಕ್ಕೆ ಋಣಿಯಾಗಿ ನೀಡಿರುವ ಜವಾಬ್ದಾರಿಯನ್ನು ಅತ್ಯಂತ ಸಮರ್ಥವಾಗಿ ನಿರ್ವಹಿಸುವ ಮೂಲಕ, ಅವರಿಗೆ ಮತ್ತು ನಮ್ಮ ಸರ್ಕಾರಕ್ಕೆ ಒಳ್ಳೆಯ ಹೆಸರು ತರುವ ಪ್ರಾಮಾಣಿಕ ಕೆಲಸವನ್ನು ಮಾಡುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು ಎಂದಿನಂತೆ ಸಚಿವರ ಬೆನ್ನುತ್ತಟ್ಟಿ ಮಾತನಾಡಿಸಿದ ಮಾನ್ಯ ಮುಖ್ಯಮಂತ್ರಿಗಳು ಶುಭ ಹಾರೈಸಿ ಎಂದಿನಂತೆ ತಮಗೆ ನೀಡುವ ಖಾತೆಯನ್ನು ಸಮರ್ಪಕವಾಗಿ ನಿರ್ವಹಿಸಿ ನಾಡಿನ ಜನತೆಗೆ ಉತ್ತಮ ಆಡಳಿತ ನೀಡುವಂತೆ ಸಲಹೆ ನೀಡಿದರು.ಈ ಸಂದರ್ಭದಲ್ಲಿ ʻಕ್ರೇಜಿಸ್ಟಾರ್‌ʼ ಖ್ಯಾತಿಯ ಶ್ರೀ ವಿ. ರವಿಚಂದ್ರನ್ ಕೂಡ ಉಪಸ್ಥಿತರಿದ್ದರೂ.

ನಂತರ ಕೆಪಿಸಿಸಿ ಅಧ್ಯಕ್ಷರಾದ ಸನ್ಮಾನ್ಯ ಬಿ.ಕೆ. ಹರಿಪ್ರಸಾದ್ ಅವರನ್ನ ಭೇಟಿ ಮಾಡಿ ನೂತನ ಸಚಿವ ಸಂಪುಟದಲ್ಲಿ ಕಾರ್ಯ ನಿರ್ವಹಿಸಲು ಅವಕಾಶ ಕೊಟ್ಟಿದ್ದಕ್ಕಾಗಿ ಅಭಿನಂದನೆ ಸಲ್ಲಿಸಿದರು.

Leave a Reply

Your email address will not be published. Required fields are marked *