ಮಂಜುನಾಥ ಶೆಟ್ಟಿ…
ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ತಕ್ಷಣ ನಿವಾರಿಸುವಂತೆ ಆಗ್ರಹಿಸಿ ಶಿವಮೊಗ್ಗ ನಾಗರಿಕ ಹಿತ ರಕ್ಷಣಾ ವೇದಿಕೆಗಳು ಒಕ್ಕೂಟ ಆರ್ ಟಿ ಓ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಆರ್ ಟಿ ಓ ಆವರಣದಲ್ಲಿರುವ ಸಾರ್ವಜನಿಕ ಶೌಚಾಲಯಕ್ಕೆ ಬೀಗ ಹಾಕಲಾಗಿದೆ. ಇದರಿಂದ ಕಚೇರಿಗೆ ಬರುವ ನಾಗರಿಕ ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಸಾರ್ವಜನಿಕರಿಗೆ ಅನುಕೂಲಕ್ಕಾಗಿ ಶೌಚಾಲಯವನ್ನು ಎಲ್ಲಾ ಸಮಯದಲ್ಲೂ ತೆರೆದಿಡಬೇಕು ಎಂದು ಆಗ್ರಹಿಸಿದರು.
ಸರ್ಕಾರಿ ಸೇವಾ ಶುಲ್ಕ ಪಲಕವನ್ನು ಸಾರ್ವಜನಿಕರಿಗೆ ಸುಲಭವಾಗಿ ಕಾಣುವ ಸ್ಥಳದಲ್ಲಿ ಪ್ರದರ್ಶಿಸುವೆ ಒಂದು ಮೂಲೆಯಲ್ಲಿ ಅಳವಡಿಸುವುದು ವೇದಿಕೆ ಖಂಡಿಸಿದ್ದು ಅದನ್ನು ಎಲ್ಲರಿಗೂ ಕಾಣುವ ಸ್ಥಳದಲ್ಲಿ ಬದಲಾವಣೆ ಮಾಡಬೇಕೆಂದು ಎಂದು ತಿಳಿಸಿದರು.
ಆರ್‌ಟಿಓ ಕಚೇರಿಯಲ್ಲಿ ಕೆಲವು ಅನಧಿಕೃತ ವ್ಯಕ್ತಿಗಳು ಕಚೇರಿ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ ಎಂಬ ಬಗ್ಗೆ ಟ್ಯಾಕ್ಸಿ ಹಾಗು ಆಟೋ ಮಾಲೀಕರು ಸೇರಿದಂತೆ ಸಾರ್ವಜನಿಕರಿಂದ ಹಲವು ದೂರುಗಳು ಬಂದಿದೆ. ಈ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿಸ್ಥರು ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಮುಂದಿನ ದಿನಗಳಲ್ಲಿ ಈ ಎಲ್ಲಾ ಸಮಸ್ಯೆಗಳು ಬಗ್ಗೆ ಹರಿಯದಿದ್ದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿ ಸಂಘಟನಾ ಕಾರ್ಯದರ್ಶಿ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿರಿದ್ದರು.