ಶಿವಮೊಗ್ಗ ನಾಗರೀಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ಮನವಿ


ಸನ್ಮಾನ್ಯ ನಾಗರಿಕ ಬಂಧುಗಳೇ ಶಿವಮೊಗ್ಗ ನಗರದ ನಾಗರಿಕರ ಮೂಲಭೂತ ಅವಶ್ಯಕತೆಗಳಾದ ಶುದ್ಧ ಕುಡಿಯುವ ನೀರು, ಸಾರ್ವಜನಿಕ ಶೌಚಾಲಯಗಳ ಕೊರತೆ, ನಗರದ ಸ್ವಚ್ಛತೆ, ಸ್ಮಾರ್ಟ್ ಸಿಟಿ ಕಾಮಗಾರಿಗಳಲ್ಲಿನ ಲೋಪ ದೋಷಗಳು, ಸುಲಲಿತ ವಾಹನ ಸಂಚಾರ ಮತ್ತು ಪಾರ್ಕಿಂಗ್ ವ್ಯವಸ್ಥೆ, ವಿದ್ಯುತ್ ಕಂಬಗಳ ತೆರವು, ಸಾರ್ವಜನಿಕ ರಸ್ತೆ ಕಬಳಿಕೆ, ಸರ್ಕಾರದ ಸುತ್ತೋಲೆಯನ್ನು ಧಿಕ್ಕರಿಸಿ ಹೆಚ್ಚುವರಿಯಾಗಿ ಸಂಗ್ರಹಿಸುತ್ತಿರುವ ಆಸ್ತಿ ವರ್ಗಾವಣೆ ಶುಲ್ಕ ಇವೇ ಮುಂತಾದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ದಿನಾಂಕ 10.08.2026 ರ ಸೋಮವಾರ ಬೆಳಿಗ್ಗೆ 11 ಗಂಟೆಗೆ ಶಿವಮೊಗ್ಗ ಶಾಸಕರ ಕಚೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.

ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಪ್ರತಿಭಟನಾ ಹೋರಾಟದಲ್ಲಿ ಪಾಲ್ಗೊಳ್ಳಬೇಕಾಗಿ ಕಳಕಳಿಯ ಮನವಿ.


Leave a Reply

Your email address will not be published. Required fields are marked *